How to add name in Electoral Voter list?: ಚುನಾವಣೆಯಲ್ಲಿ ಮತದಾನ ಮಾಡಬೇಕಾದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ಮತ ಚಲಾಯಿಸಲು ಸಾಧ್ಯವಿಲ್ಲ. ಹೀಗಾಗಿ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಬೇಕು.
Loksabha Elections 2024: ಇನ್ನು ಕೆಲವೇ ದಿನಗಳಲ್ಲಿ 2024ರ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈಗಾಗಲೇ ಅಬ್ಬರ ಪ್ರಚಾರ ನಡೆಸುತ್ತಿದ್ದು, ವಿರೋಧಿಗಳ ವಿರುದ್ಧ ಟೀಕಾಪ್ರಹಾರ ನಡೆಸುತ್ತ ಮತಬೇಟೆ ನಡೆಸುತ್ತಿದ್ದಾರೆ. ಈ ಬಾರಿ ದೇಶದ ಮತದಾರ ಯಾರಿಗೆ ವಿಜಯಮಾಲೆ ಹಾಕುತ್ತಾನೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಪ್ರಧಾನಿ ಮೋದಿ ನೇತೃತ್ವದ NDA ಮತ್ತು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನೇತೃತ್ವದ ʼಇಂಡಿಯಾ ಮೈತ್ರಿಕೂಟʼದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮತದಾನವೆಂಬುದು ದೇಶದ ಪ್ರಜೆಯ ಮೂಲಭೂತ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬ ಭಾರತೀಯನೂ ತನ್ನ ಹಕ್ಕು ಚಲಾಯಿಸಬೇಕು. ಚುನಾವಣೆಯಲ್ಲಿ ಮತದಾನ ಮಾಡಬೇಕಾದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ಮತ ಚಲಾಯಿಸಲು ಸಾಧ್ಯವಿಲ್ಲ. ಹೀಗಾಗಿ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಬೇಕು. ಹಾಗಾದ್ರೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು ಹೇಗೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಚುನಾವಣೆಯಲ್ಲಿ ಮತದನಾ ಮಾಡಲು ನಿಮಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ ವರ್ಷದ ಜನವರಿ 1 ರಿಂದ 18 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸಿನ ಭಾರತೀಯರಾಗಿರಬೇಕು ಮತ್ತು ಯಾವುದೇ ಕಾನೂನಿನ ಅಡಿ ಅನರ್ಹರಾಗಬಾರದು.
ಚುನಾವಣಾ ಆಯೋಗವು ಆನ್‌ಲೈನ್ ನೋಂದಣಿ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (NVSP) ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಮತದಾರರ ಸಹಾಯವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಿರಿ.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಲು ಆನ್‌ಲೈನ್ ಫಾರ್ಮ್ 6 ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳು ಹಾಗೂ ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಅಪ್‌ಲೋಡ್ ಮಾಡಲಾದ ಎಲ್ಲಾ ದಾಖಲೆಗಳು ಮಾನ್ಯವಾಗಿದೆ ಎಂದು ಖಚಿತಪಡಿಸಿಕೊಳ್ಳಿ. ದಾಖಲೆಗಳಲ್ಲಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಅಥವಾ ಸರ್ಕಾರ ನೀಡಿದ ಗುರುತಿನ ಚೀಟಿ ಇರುತ್ತದೆ.
ನಿಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ ಒದಗಿಸಿದ ಮಾಹಿತಿಯನ್ನು ಪರಿಶೀಲಿಸಲು ಬೂತ್ ಮಟ್ಟದ ಅಧಿಕಾರಿ (BLO) ಸ್ಥಳ ಪರಿಶೀಲನೆ ನಡೆಸುತ್ತಾರೆ. ಪರಿಶೀಲನಾ ಪ್ರಕ್ರಿಯೆಯ ಸಮಯದಲ್ಲಿ ನೀವು ಅದೇ ವಿಳಾಸದಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. NVSP ವೆಬ್‌ಸೈಟ್ ಅಥವಾ ಮತದಾರರ ಸಹಾಯವಾಣಿ ಅಪ್ಲಿಕೇಶನ್ ಮೂಲಕ ನಿಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದು. ನಿಮ್ಮ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಸಹಾಯ ಅಥವಾ ಪ್ರಶ್ನೆಗಳಿಗೆ ನೀವು ಚುನಾವಣಾ ಆಯೋಗದ ಸಹಾಯವಾಣಿಯನ್ನು ಸಂಪರ್ಕಿಸಬಹುದು.
ನಿಮ್ಮ ವೋಟರ್ ಲಿಸ್ಟ್‌ನಲ್ಲಿ ಯಾವುದೇ ದೋಷಗಳು ಅಥವಾ ಬದಲಾವಣೆ ಮಾಡಬೇಕಾದ ಸಂದರ್ಭದಲ್ಲಿ ಫಾರ್ಮ್ 8, ಫಾರ್ಮ್ 8A ಆಯ್ಕೆ ಮಾಡಿಕೊಳ್ಳಬಹುದು. ನಂತರ ತಿದ್ದುಪಡಿ ಮಾಹಿತಿ ಸರಿಪಡಿಸಬಹುದು. ನೀವು ನೇರವಾಗಿ ಹತ್ತಿರದ ಚುನಾವಣಾ ನೋಂದಣಿ ಅಧಿಕಾರಿ (ERO) ಕಚೇರಿ ಅಥವಾ ಮತದಾರರ ಅನುಕೂಲ ಕೇಂದ್ರ (VFC)ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.