LPG Price: ಕೇವಲ 450 ರೂ.ಗೆ ಗ್ಯಾಸ್ ಸಿಲಿಂಡರ್ ಪಡೆಯುವ ಅವಕಾಶ: ಎಲ್ಲಿ? ಹೇಗೆ ಗೊತ್ತಾ?
ಮಧ್ಯಪ್ರದೇಶ ಸರ್ಕಾರ್ವು ಅಗ್ಗದ ಬೆಲೆಯಲ್ಲಿ ಸಿಲಿಂಡರ್ ಬುಕ್ ಮಾಡಲು ಅವಕಾಶ ಕಲ್ಪಿಸಿದೆ. ಸೆಪ್ಟೆಂಬರ್ 01, 2023ರಂದು ರಾಜ್ಯ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿತು.
ಉಜ್ವಲಾ ಯೋಜನೆಯ ಫಲಾನುಭವಿಗಳು, ಎಲ್‌ಪಿಜಿ ಸಂಪರ್ಕ ಹೊಂದಿರುವ ಮಹಿಳೆಯರು ಮತ್ತು ಲಾಡ್ಲಿ ಬೆಹ್ನಾ ಯೋಜನೆಯ ಫಲಾನುಭವಿಗಳು ಕೇವಲ 450 ರೂ.ಗಳಿಗೆ ಸಿಲಿಂಡರ್ ಬುಕ್ ಮಾಡಲು ಮಧ್ಯಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿದೆ.
ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 200 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಘೋಷಿಸಿದೆ.
ಕೇಂದ್ರ ಸರ್ಕಾರವು ಎಲ್‌ಪಿಜಿ ಬೆಲೆಯಲ್ಲಿ ಇಳಿಕೆ ಘೋಷಿಸಿದ ಎರಡೇ ದಿನಗಳಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಸಹ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.
ಕೇವಲ 450 ರೂಪಾಯಿಗಳಿಗೆ ಎಲ್‌ಪಿಜಿ ಸಿಲಿಂಡರ್ ಪಡೆಯಲು, ಅರ್ಜಿದಾರರು ಲಾಡ್ಲಿ ಬಹನ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಗ್ರಾಮ ಪಂಚಾಯಿತಿ ಕಚೇರಿ, ಅಂಗನವಾಡಿ ಕಚೇರಿ ಅಥವಾ ಕ್ಯಾಂಪ್ ಆಫೀಸ್‌ನಲ್ಲಿ ಲಾಡ್ಲಿ ಬಹನ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮಧ್ಯಪ್ರದೇಶ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.