ಈ ದಿನ ಸಂಭವಿಸಲಿದೆ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಲಾಭ ತಿಳಿಯಲು ಲೇಖನ ಓದಿ!

Sat, 06 Jan 2024-4:13 pm,

Lunar Eclipse 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ 25, 2024ರಂದು ಅಂದರ ಸೋಮವಾರದ ದಿನ 2024 ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೇಯ ದಿನಗಳಿಗೆ ನಾಂದಿ ಹಾಡಲಿದೆ. (Spiritual News In Kannada)   

ಮಿಥುನ ರಾಶಿ: ಈ ಚಂದ್ರಗ್ರಹಣ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕುಟುಂಬದ ಬೆಂಬಲ ಕೂಡ ಸಿಗಲಿದೆ. ವ್ಯಾಪಾರದಲ್ಲಿ ವೃದ್ಧಿಯ ಸಂಕೇತಗಳಿವೆ. ಹಲವು ದಿನಗಳಿಂದ ನಿಮಗೆ ಬರಬೇಕಾದ ಹಣ ನಿಮ್ಮತ್ತ ಮರಳಲಿದೆ. ವಾಹನ ಸುಖ ಪ್ರಾಪ್ತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ನೌಕರ ವರ್ಗದ ಜನರಿಗೆ ಪ್ರಮೋಷನ್-ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನದಲ್ಲಿ ಪ್ರೇಮ ಹಾಗೂ ಸಮತೋಲನ ಇರಲಿದೆ. ಲವ್ ಲೈಫ್ ನಲ್ಲಿ ಪ್ರೇಯಸಿಯ ಜೊತೆಗೆ ರೊಮ್ಯಾಂಟಿಕ್ ಕಾಲ ಕಳೆಯುವಿರಿ. 

ಸಿಂಹ ರಾಶಿ: ನಿಮ್ಮ ಪಾಲಿಗೂ ಕೂಡ ಚಂದ್ರಗ್ರಹಣ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಉಂಟಾಗಲಿದೆ. ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಪತಿ ಅಥವಾ ಪತ್ನಿಯ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. ಸಾಮಾಜಿಕ ಜೀವನದಲ್ಲಿ ನಿಮ್ಮ ಪ್ರತಿಷ್ಠೆ ಹಾಗೂ ಪ್ರಭಾವ ಎರಡೂ ಹೆಚ್ಚಾಗಲಿವೆ. ವ್ಯಾಪಾರ ವಿಸ್ತರಣೆಗಾಗಿ ನೀವು ಪಡುವ ಪ್ರಯತ್ನದಲ್ಲಿ ಯಶಸ್ವಿಯಾಗುವಿರಿ. ಪಾರ್ಟ್ನರ್ಶಿಪ್ ನಲ್ಲಿ ವ್ಯವಹಾರ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಿ ಜನ ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. 

ಮಕರ ರಾಶಿ: ಈ ಚಂದ್ರ ಗ್ರಹಣ ನಿಮಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ನೀಡಲಿದೆ. ವೈವಾಹಿಕ ಜೀವನದಲ್ಲಿ ನಿಮ್ಮ ಪ್ರೇಮ-ಸಮತೋಲನ ಮುಂದುಯರೆಯಲಿದೆ. ಲವ್ ಲೈಫ್ ನಲ್ಲಿ ಪ್ರೇಯಸಿಯ ಜೊತೆಗೆ ರೊಮ್ಯಾಂಟಿಕ್ ಕಾಲ ಕಳೆಯುವಿರಿ. ಸಿಲುಕಿಕೊಂಡ ಹಣ ನಿಮ್ಮ ಕೈಸೇರಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಸ್ಥಾನ-ಮಾನ-ಪ್ರತಿಷ್ಠೆ ಹೆಚ್ಚಾಗಲಿದೆ. ದೇಶ-ವಿದೇಶಕ್ಕೆ ಯಾತ್ರೆ ಕೂಡ ಸಂಭವಿಸುವ ಸಾಧ್ಯತೆ ಇದೆ. ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ನಿಮಗೆ ಸಿಗಲಿದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link