ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ ! ಸರ್ಕಾರದಿಂದ ಹೊರ ಬಿತ್ತು ಸ್ಪಷ್ಟ ಮಾಹಿತಿ

ಇದೀಗ ಒಪಿಎಸ್ ಜಾರಿ ಕುರಿತಂತೆ ಸರ್ಕಾರದಿಂದ ಮಾಹಿತಿ ಹಿರ ಬಿದ್ದಿದೆ. ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರ ಹೇಳಿದೆ. 

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಗಳು ಫಲ ನೀಡಿದಂತೆ ಕಾಣುತ್ತಿದೆ. ಈ ಬಾರಿಯ ರಾಜ್ಯ ಬಜೆಟ್‌ ನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯನ್ನು ಸರ್ಕಾರ ಘೋಷಣೆ ಮಾಡಲಿದೆ ಎನ್ನುವ ನಿರೀಕ್ಷೆ ನೌಕರರದ್ದಾಗಿತ್ತು. ಆದರೆ ಇದೀಗ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಅಪ್‌ಡೇಟ್‌ ಸಿಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 

Sun Direct-292 
TATA PLAY- 1664 
JIO TV-1334 
NXT Digital-30 

IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /6

ಹೊಸ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆಯನ್ನೇ ಮತ್ತೆ ಜಾರಿಗೆ ತರಬೇಕು ಎನ್ನುವುದು ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ. ಇದಕ್ಕಾಗಿ ಪ್ರತಿಭಟನೆ, ಸಮಾವೇಶಗಳೆಲ್ಲವನ್ನೂ ನಡೆಸಿ ಆಗಿದೆ. 

2 /6

ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದ್ದರೂ, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗಿಂತ ಹಳೆಯ ಪಿಂಚಣಿ ಯೋಜನೆ ನಿಜವಾಗಿಯೂ ಉತ್ತಮವಾಗಿದೆ ಎನ್ನುವುದು ನೌಕರರ ವಾದ. ಈ ಕಾರಣದಿಂದಲೇ ಒಪಿಎಸ್ ಮರು ಜಾರಿಗೆ ನೌಕರಾರು ಒತ್ತಾಯಿಸುತ್ತಿರುವುದು.   

3 /6

ಇದೀಗ ಒಪಿಎಸ್ ಜಾರಿ ಕುರಿತಂತೆ ಸರ್ಕಾರದಿಂದ ಮಾಹಿತಿ ಹೊರ ಬಿದ್ದಿದೆ. ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರ ಹೇಳಿದೆ. ಸರ್ಕಾರ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದೆ.   

4 /6

ಹೌದು, ಹಳೆ ಪಿಂಚಣಿ ಯೋಜನೆ ಜಾರಿ ಕುರಿತಾಗಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ಈ ಮೂಲಕ ರಾಜ್ಯ ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಒಪಿಎಸ್ ಅನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

5 /6

ಇದಕ್ಕಾಗಿ  ಅಂಜುಮ್ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿಯನ್ನು ಅಧ್ಯಯನ ಮಾಡಿದ ನಂತರ ಸರ್ಕಾರ ಅದನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.  

6 /6

ಸಚಿವರು ಈ ರೀತಿ ಅಧಿಕೃತವಾಗಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರೀ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಯಾಗುವ ದಿನಗಳು ಸನ್ನಿಹಿತವಾಗುತ್ತಿವೆ ಎನ್ನುವ ಅಂಶ ಸ್ಪಷ್ಟವಾಗುತ್ತಿದೆ.