Photo Gallery: ಹೇಗಿತ್ತು ನೂತನ `ಮಹಾ` ಸಿಎಂ ಏಕನಾಥ್ ಶಿಂಧೆ ಪದಗ್ರಹಣ ಸಮಾರಂಭ?
ಇದಕ್ಕೂ ಮುನ್ನ ಫಡ್ನವಿಸ್ ಅವರು ಸರ್ಕಾರದಲ್ಲಿ ಇರುವುದಿಲ್ಲ ಎಂದು ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, ಫಡ್ನವಿಸ್ ಅವರು ಶಿಂಧೆ ನೇತೃತ್ವದ ಹೊಸ ಮಹಾರಾಷ್ಟ್ರ ಸಂಪುಟದ ಭಾಗವಾಗಲಿದ್ದಾರೆ ಎಂದು ಹೇಳಿದರು.
ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಎಂವಿಎ ಮೈತ್ರಿ ವಿರುದ್ಧದ ಸದನ ಪರೀಕ್ಷೆಗೆ ಮುಂಚಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆಗಳು ನಡೆದಿವೆ.
ಈ ಹಿಂದೆ ಫಡ್ನವಿಸ್ ಮುಖ್ಯಮಂತ್ರಿಯಾಗಲಿದ್ದು, ಶಿಂಧೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಊಹಿಸಲಾಗಿತ್ತು.
ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಜೆ 7:30ಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಸಮ್ಮುಖದಲ್ಲಿ ಶಿಂಧೆ ಅವರು ರಾಜ್ಯದ ಉನ್ನತ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರು.