Mahindra XUV 3XO: ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಪ್ರಬಲ ಎದುರಾಳಿಯಾಗಿವೆ.
Mahindra XUV 3XO: ಭಾರತೀಯ ಪ್ರಸಿದ್ಧ ವಾಹನ ತಯಾರಕ ಕಂಪನಿ ಮಹೀಂದ್ರಾ ಇತ್ತೀಚೆಗಷ್ಟೇ ದೇಶೀಯ ಮಾರುಕಟ್ಟೆಗೆ ಹೊಚ್ಚ ಹೊಸ XUV 3XO ಕಾರನ್ನು ಬಿಡುಗಡೆ ಮಾಡಿದೆ. ಈ SUV ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ನೀವು ಅತ್ಯಂತ ಕಡಿಮೆ ಬೆಲೆಯ EMI ಆಪ್ಶನ್‌ನಲ್ಲಿ ಈ ಕಾರನ್ನು ಖರೀದಿಸಿ ಮನೆಗೆ ಕೊಂಡೊಯ್ಯಬಹುದು. ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಪ್ರಬಲ ಎದುರಾಳಿಯಾಗಿವೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಬೆಂಗಳೂರಿನಲ್ಲಿ ಹೊಸ ಮಹೀಂದ್ರಾ XUV 3XO ಕಾರಿನ ಪೆಟ್ರೋಲ್ ಚಾಲಿತ ಬೇಸ್ ಮಾಡೆಲ್(ಆರಂಭಿಕ ಮಾದರಿ) ಆಗಿರುವ MX19.06 ಲಕ್ಷ ರೂ., ಟಾಪ್ ಎಂಡ್ ಮಾಡೆಲ್(ಗರಿಷ್ಠ ಶ್ರೇಣಿ) ಎಂದು ಹೆಸರಿಸಲಾಗಿರುವ AX7 L ಟರ್ಬೊ AT 19.27 ಲಕ್ಷ ರೂ. ಆನ್-ರೋಡ್ ಬೆಲೆಯನ್ನು ಹೊಂದಿದೆ. ಅದೇ ರೀತಿ ಡಿಸೇಲ್ ಚಾಲಿತ ಬೇಸ್ ಮಾಡೆಲ್ MX2 12.04 ಲಕ್ಷ ರೂ. ಹಾಗೂ ಟಾಪ್ ಎಂಡ್ ಮಾಡೆಲ್ AX7 L 18.65 ಲಕ್ಷ ರೂ. ಆನ್-ರೋಡ್ ಬೆಲೆ ಹೊಂದಿದೆ.
ನೀವು ಈ ಕಾರನ್ನು 2 ಲಕ್ಷ ರೂ.ಗಳ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇ.9.8ರಷ್ಟು ಬಡ್ಡಿ ದರದಲ್ಲಿ ಮಾಸಿಕ 14,925 ರೂ. EMI ಪಾವತಿಸಬೇಕಾಗುತ್ತದೆ. ನೂತನ ಮಹೀಂದ್ರಾ XUV 3XOಯು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, LED ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು, ಹೊಸ ಬಂಪರ್, ಹೊಸತನದಿಂದ ಕೂಡಿರುವ ಅಲಾಯ್ ವೀಲ್‌ಗಳು, ಸಿ-ಆಕಾರಕ್ಕೆ ಹೋಲುವ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ಸಿಗಲಿದ್ದು, ಈ ಕಾರಿನಲ್ಲಿ 5 ಮಂದಿ ಆರಾಮವಾಗಿ ಪ್ರಯಾಣಿಸಬಹುದು.
ಈ ಕಾರು ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 PS ಗರಿಷ್ಠ ಪವರ್ (ಶಕ್ತಿ) ಹಾಗೂ 200 NM ಪೀಕ್ ಟಾರ್ಕ್ ಹೊರಹಾಕುತ್ತದೆ. 1.2-ಲೀಟರ್ TGDI ಟರ್ಬೊ ಪೆಟ್ರೋಲ್ ಎಂಜಿನ್ 130 PS ಪವರ್ ಮತ್ತು 250 NM ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 PS ಪವರ್ ಹಾಗೂ 300 NM ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 17.96 ರಿಂದ 20.1 KMPL, ಡೀಸೆಲ್ ಮಾದರಿಗಳು 20.6ರಿಂದ 21.2 KMPL ಮೈಲೇಜ್ ನೀಡುತ್ತವೆ.
ಮಹೀಂದ್ರಾ XUV 3XO SUVಯು ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್-ಜೋನ್ AC, ವೈರ್‌ಲೆಸ್ ಫೋನ್ ಚಾರ್ಜರ್, ಕನೆಕ್ಟೆಡ್ ಕಾರ್‌ಟೆಕ್, ಅಲೆಕ್ಸಾ ಕನೆಕ್ಟಿವಿಟಿ, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಪ್ರಬಲ ಎದುರಾಳಿಯಾಗಿವೆ.