ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಬದಲಾವಣೆ !ಈ ಬದಲಾವಣೆ ಹಿಂದಿರುವುದು ಎರಡು ಪ್ರಮುಖ ಕಾರಣ
ಚಿನ್ನದ ಬೆಲೆಯಲ್ಲಿ ಏರಿಕೆ ಇಳಿಕೆ ಕಾಣುತ್ತಲೇ ಇದೆ. ಏರಿಕೆಯಾದ ಚಿನ್ನ ಒಂದೇ ಮಟ್ಟಕ್ಕೆ ಇಳಿಕೆ ಕಂಡರೆ, ಮತ್ತೆ ರಾಕೆಟ್ ವೇಗದಲ್ಲಿ ಏರಿಕೆ ಕಾಣುತ್ತಿದೆ.
ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದ ಬಂಗಾರ ಈಗ ಮತ್ತೆ ಏರಿಕೆಯತ್ತ ಸಾಗುತ್ತಿದೆ. ಕಳೆದ ಒಂದು ವಾರದಲ್ಲಿ 24ಕ್ಯಾರೆಟ್ ಚಿನ್ನದ ಬೆಲೆ 3,990ರಷ್ಟು ಏರಿಕೆಯಾಗಿದೆ.
ಜಾಗತಿಕವಾಗಿ ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಮದುವೆಯ ಋತುವಿನಿಂದ ಚಿನ್ನದ ಖರೀದಿಯಲ್ಲಿ ಆಗುತ್ತಿರುವ ಹೆಚ್ಚಳದಿಂದ ಚಿನ್ನದ ದರ ಕೂಡಾ ಏರಿಕೆಯಾಗುತ್ತಿದೆ.
ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹79,790 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹73,150 ಆಗಿದೆ. ಮುಂಬೈ ಮತ್ತು ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹79,640 ಮತ್ತು 22 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹73,000 ಆಗಿದೆ. ಚೆನ್ನೈ, ಬೆಂಗಳೂರು, ಭೋಪಾಲ್, ಅಹಮದಾಬಾದ್, ಹೈದರಾಬಾದ್, ಜೈಪುರ ಮತ್ತು ಚಂಡೀಗಢದಲ್ಲೂ ಚಿನ್ನದ ಬೆಲೆ ಇದೇ ಶ್ರೇಣಿಯಲ್ಲಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಚಿನ್ನದ ಮೇಲೆ ಹೂಡಿಕೆ ಮಾಡುವಲ್ಲಿ ಜನರನ್ನು ಪ್ರೋತ್ಸಾಹಿಸುತ್ತಿದೆ. ಹೀಗಾಗಿ ಜನ ಮತ್ತೆ ಬಂಗಾರದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಭಾರತದಲ್ಲಿ ಮದುವೆಯ ಸೀಸನ್ ಇರುವ ಕಾರಣ ಚಿನ್ನದ ಬೇಡಿಕೆ ಹೆಚ್ಚಾಗಿದೆ.
ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದೆ. ಕಳೆದ ಒಂದು ವಾರದಲ್ಲಿ ಬೆಳ್ಳಿ ಕೆಜಿಗೆ 2500 ಏರಿಕೆಯಾಗಿದೆ.
ಇನ್ನು ನಿಮ್ಮ ನಗರದ ಬಂಗಾರದ ಇಂದಿನ ನಿಖರವಾದ ಬೆಲೆಯನ್ನು ತಿಳಿಯಲು ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಶನ್‌ನ ಅಧಿಕೃತ ವೆಬ್‌ಸೈಟ್ ibjarates.com ಅನ್ನು ಸಂಪರ್ಕಿಸಬಹುದು.