Health Benefits Of Malabar: ಬಸಳೆ ಸೊಪ್ಪಿನಲ್ಲಿದೆ ಆರೋಗ್ಯದಾಯಕ ಗುಣಗಳು..
ಬಸಳೆ ಸೊಪ್ಪು ವಿಟಮಿನ್ ' ಎ ', ವಿಟಮಿನ್ ' ಸಿ ', ವಿಟಮಿನ್ ' ಬಿ9 ', ಕಬ್ಬಿಣ, ಕ್ಯಾಲ್ಸಿಯಂ, ತಾಮ್ರ, ಮೆಗ್ನೀಷಿಯಂ, ಪೋಸ್ಫ್ಯಾರಸ್, ಪೊಟ್ಯಾಸಿಯಂ ಮತ್ತು ಇನ್ನಿತರ ಖನಿಜ ಸತ್ವಗಳನ್ನು ಹೊಂದಿದೆ.
ಬಸಳೆ ಸೊಪ್ಪಿನಲ್ಲಿ ಕಬ್ಬಿಣದ ಅಂಶವು ಹೇರಳವಾಗಿದೆ. ದೇಹದಲ್ಲಿ ಕಬ್ಬಿಣ ಅಂಶ ಹೆಚ್ಚಿದಷ್ಟು ರಕ್ತಹೀನತೆಯ ಸಮಸ್ಯೆಯನ್ನು ತಡೆಯುತ್ತದೆ.
ಬಸಳೆ ಆರೋಗ್ಯಕ್ಕೆ ಮಾತ್ರವಲ್ಲದೇ ಸೌಂದರ್ಯಕ್ಕೂ ಪ್ರಯೋಜನವಾಗಿದೆ.
ಬಸಳೆ ಸೊಪ್ಪು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ.ಇದು ಕ್ಯಾನ್ಸರ್ ತಡೆಯುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿರುವ ಪೊಟ್ಯಾಶಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬಸಳೆ ಸೊಪ್ಪುನ್ನು ಆಹಾರದಲ್ಲಿ ಹೆಚ್ಚಾಗಿ ಬಳಸುವುದರಿಂದ ದೇಹದ ಸ್ನಾಯುಗಳನ್ನು ಸಧೃಡವಾಗಿಸಲು ಸಹಕರಿಸುತ್ತದೆ.