Malashree daughter name : ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ ಎಂದು ಮಾಲಾಶ್ರೀ ಅವರು ಸಹ ತಿಳಿಸಿದ್ದಾರೆ.
ನಟಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ.
ರಾಧನಾ ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ.
ರಾಧನಾ ಕಾಟೇರ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾದಲ್ಲಿ ರಾಧನಾ ನಟಿಸುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.
ಮಾಲಾಶ್ರೀ ಮತ್ತು ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದಾರಂತೆ.
ಈ ಹೆಸರು ಬರೀ "ಕಾಟೇರ" ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ. ಇದೇ ಹೆಸರಿನಿಂದ ಕರೆಯಿರಿ ಅಂತ ಮಾಲಾಶ್ರೀ ಸಹ ವಿನಂತಿಸಿದ್ದಾರೆ.