Malavya Mahapurush Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನ-ಸಂಪತ್ತು ಕರುಣಿಸುವಾತ ಶುಕ್ರ ಮಾಲವ್ಯ ರಾಜಯೋಗವನ್ನು ರಚಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜನರ ಮೇಲೆ ತಾಯಿ ಲಕ್ಷ್ಮಿ ಕೃಪೆಯಿಂದ ಅಪಾರ ಧನವೃಷ್ಟಿಯಾಗಿ, ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)
ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಪಂಚಮಹಾಪುರುಷ ರಾಜಯೋಗಗಳ ವರ್ಣನೆ ನಿಮಗೆ ಸಿಗುತ್ತದೆ. ಇವುಗಳಲ್ಲಿ ಶಶ ಮಹಾಪುರುಷ ರಾಜಯೋಗ ಶನಿಯಿಂದ ರೂಪುಗೊಂದರೆ, ಶುಕ್ರನಿಂದ ಮಾಲವ್ಯ ಮಹಾಪುರುಷ ರಾಜಯೋಗ ರಚನೆಯಾಗುತ್ತದೆ. ಪ್ರಸ್ತುತ ನಾವು ನಿಮಗೆ ಹೇಳಲು ಹೊರಟಿದ್ದು ಮಾಲವ್ಯ ಮಹಾಪುರುಷ ರಾಜಯೋಗದ ಬಗ್ಗೆ. ಮಾರ್ಚ್ ತಿಂಗಳಿನಲ್ಲಿ ಶುಕ್ರನ ಕೃಪೆಯಿಂದ ಈ ಯೋಗ ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲಿಯೂ ವಿಶೇಷವಾಗಿ ಕೆಲ ರಾಶಿಗಳ ಜನರಿಗೆ ಈ ಯೋಗ ಅಪಾರ ಧನಲಾಭ ಹಾಗೂ ಭೌತಿಕ ಸುಖಗಳನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳ ಯಾವುವು ತಿಳಿದುಕೊಳ್ಳೋಣ, (Spiritual News In Kannada)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Malavya Mahapurush Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನ-ಸಂಪತ್ತು ಕರುಣಿಸುವಾತ ಶುಕ್ರ ಮಾಲವ್ಯ ರಾಜಯೋಗವನ್ನು ರಚಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜನರ ಮೇಲೆ ತಾಯಿ ಲಕ್ಷ್ಮಿ ಕೃಪೆಯಿಂದ ಅಪಾರ ಧನವೃಷ್ಟಿಯಾಗಿ, ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.
ವೃಶ್ಚಿಕ ರಾಶಿ: ಇದು ನಿಮ್ಮ ಜಾತಕದ ಪಂಚಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ನಿಮಗೆ ಸಿಗಲಿದೆ. ಅರ್ಥಾತ್ ಮಕ್ಕಳ ನೌಕರಿ ಅಥವಾ ವಿವಾಹಕ್ಕೆ ಸಂಬಂಧಿಸಿದ ಸಿಹಿಸುದ್ದಿ ನಿಮಗೆ ಸಿಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧದಲ್ಲಿರುವವಾರ ವಿವಾಹ ನಿಶ್ಚಿತಾರ್ಥ ನೆರವೇರುವ ಸಾಧ್ಯತೆಯೂ ಇದೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕೂಡ ಉಂಟಾಗಲಿದೆ. ಧನ ಪ್ರಾಪ್ತಿಯ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರದಲ್ಲಿ ಧನಲಾಭ ಉಂಟಾಗಲಿದೆ. ಯಾವುದಾದರೊಂದು ಸ್ಥಿರಾಸ್ತಿ ಅಥವಾ ಚರಾಸ್ತಿಯನ್ನು ನೀವು ಖರೀದಿಸುವ ಸಾಧ್ಯತೆ ಇದೆ. ಶುಕ್ರ ನಿಮ್ಮ ರಾಶಿಯ ರಾಶ್ಯಾಧಿಪನಾಗಿದ್ದಾನೆ. ಹೀಗಾಗಿ ಮಾಲವ್ಯ ರಾಜಯೋಗ ನಿಮ್ಮ ಪಾಲಿಗೆ ಒಂದು ವರದಾನ ಎಂದರೆ ತಪ್ಪಾಗಲಾರದು,
ಕುಂಭ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನೀವು ಆಕಸ್ಮಿಕ ಧನಲಾಭವನ್ನು ನಿರೀಕ್ಷಿಸಬಹುದು ಈ ಅವಧಿಯಲ್ಲಿ ನಿಮ್ಮ ತಿಜೋರಿಗೆ ಹಣದ ಒಳಹರಿವು ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಿ, ಆರ್ಥಿಕ ಸ್ಥಿತಿ ಬಲಿಷ್ಠಗೊಳ್ಳಲಿದೆ. . ಶುಕ್ರ ನಿಮ್ಮ ಜಾತಕದ ಚತುರ್ಥ ಹಾಗೂ ನವಮ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗಲಿದೆ. ಆದಾಯ ದ್ವಿಗುಣಗೊಳ್ಳಲಿದೆ ಆದಾಯದ ಹೊಸ ಮೂಲಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸಲಿದೆ.
ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ರಾಜಯೋಗ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಬಾಳಸಂಗಾತಿಯ ಜೊತೆಗೆ ಉತ್ತಮ ಹೊಂದಾಣಿಕೆ ಇರಲಿದೆ. ಅವಿವಾಹಿತರ ವಿವಾಹ ನಿಶ್ಚಿತಾರ್ಥ ನೆರವೇರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಗೆ ಉತ್ತಮ ರೀಟರ್ನ್ ಸಿಗಲಿದೆ. ಆರ್ಥಿಕ ಸ್ಥಿತಿ ಗಟ್ಟಿಗೊಳ್ಳಲಿದೆ. ಪ್ರೇಮಸಂಬಂಧದಲ್ಲಿ ಪ್ರೇಮ ಉಕ್ಕಿ ಹರಿಯಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)