Premature White Hair Remedies:ಕೆಲವು ಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.
Mango Leaves For Premature White Hair : ಪ್ರಸ್ತುತ ದಿನಗಳಲ್ಲಿ, ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ, ಯುವಕ ಯುವತಿಯರು ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದಾರೆ. ಹಿಂದಿನ ಕಾಲದಲ್ಲಿ, ಬಿಳಿ ಕೂದಲನ್ನು ವೃದ್ಧಾಪ್ಯದ ಸಂಕೇತವೆಂದು ಹೇಳಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬೇಕಾದರೆ ರಾಸಾಯನಿಕಗಳಿಂದ ತುಂಬಿರುವ ಬಣ್ಣಗಳನ್ನು ಬಳಸಬೇಕಾಗಿಲ್ಲ. ಇದು ಕೂದಲನ್ನು ನಿರ್ಜೀವಗೊಳಿಸುತ್ತದೆ. ಬದಲಾಗಿ ನೈಸರ್ಗಿಕ ಸಲಹೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಮೆಲನಿನ್ ಕೊರತೆಯಾದಾಗ ನಮ್ಮ ಕೂದಲು ಬೆಳ್ಳಗಾಗುತ್ತದೆ.ಆದರೆ ಕಡಿಮೆ ಪೋಷಕಾಂಶದ ಆಹಾರವನ್ನು ಸೇವಿಸುವುದರಿಂದಲೂ ಈ ಸಮಸ್ಯೆ ಎದುರಾಗುತ್ತದೆ.
ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ನೈಸರ್ಗಿಕ ಪರಿಹಾರಗಳನ್ನು ಪ್ರಯತ್ನಿಸಬಹುದು. ಮಾವಿನ ಎಲೆಗಳು ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತವೆ.
ಮಾವಿನ ಎಲೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ತಾಮ್ರ ಕಂಡುಬರುತ್ತದೆ. ಇದಲ್ಲದೇ ಮಾವಿನ ಎಲೆಗಳಲ್ಲಿ ಫಿನಾಲ್ ಎಂಬ ಆ್ಯಂಟಿ ಆಕ್ಸಿಡೆಂಟ್ ಇದ್ದು, ನಮ್ಮ ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.
ಮೊದಲು ಮಾವಿನ ಎಲೆಗಳನ್ನು ಕಿತ್ತು ಈಗ ಅದನ್ನು ಪುಡಿಮಾಡಿ ಪೇಸ್ಟ್ ತಯಾರಿಸಿ. ಈಗ ಅದನ್ನು ಕೂದಲಿಗೆ ಹಚ್ಚಿ ಮತ್ತು ಸುಮಾರು ಅರ್ಧ ಘಂಟೆಯವರೆಗೆ ಬಿಟ್ಟು ಕೂದಲನ್ನು ತೊಳೆಯಿರಿ. ನಿಯಮಿತವಾಗಿ ಇದನ್ನೂ ಮಾಡುತ್ತಾ ಬಂದರೆ ಕೆಲವೇ ವಾರಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು.
ಮಾವಿನ ಎಲೆಗಳನ್ನು ಕೆಲವು ಪೇರಳೆ ಎಲೆಗಳೊಂದಿಗೆ ತೆಗೆದುಕೊಂಡು ಅವುಗಳನ್ನು ಒಂದು ಪಾತ್ರೆಯಲ್ಲಿ ನೀರಿನೊಂದಿಗೆ ಚೆನ್ನಾಗಿ ಕುದಿಸಿ. ನೀರಿನ ಬಣ್ಣ ಬದಲಾದ ತಕ್ಷಣ, ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ನೀರು ತಣ್ಣಗಾಗಲು ಬಿಡಿ. ಈ ನೀರನ್ನು ತಲೆಯ ಬುಡಕ್ಕೆ ಹಚ್ಚಿ. ನಿಯಮಿತವಾಗಿ ಹೀಗೆ ಮಾಡುವುದರಿಂದ ಕೂದಲು ಕಪ್ಪಾಗುವುದು ಮಾತ್ರವಲ್ಲದೆ ಬಿಳಿ ಕೂದಲು ಬೆಳೆಯುವುದು ಕಡಿಮೆಯಾಗುತ್ತದೆ. ( ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)