ಫೋಟೋ: ಸರಳತೆ, ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅಪರೂಪದ ರಾಜಕಾರಣಿ ಮನೋಹರ್ ಪರ್ರಿಕರ್

Mon, 18 Mar 2019-12:32 pm,

ಡಿಸೆಂಬರ್‌ 13, 1955ರಲ್ಲಿ ಗೋವಾದ ಮಾಪುಸಾದಲ್ಲಿ ಜನಿಸಿದ ಮನೋಹರ್‌ ಪರಿಕ್ಕರರಿಗೆ ಬಾಲ್ಯದಿಂದಲೇ ಆರ್‌ಎಸ್ಎಸ್‌ ಜೊತೆ ಅವಿನಾಭಾವ ನಂಟು ಹೊಂದಿದ್ದರು. ಗೋವಾ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ 2018 ರ ಫೆಬ್ರವರಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಐಐಟಿ-ಬಾಂಬೆ ವಿದ್ಯಾರ್ಥಿಯಾಗಿದ್ದ ಪರ್ರಿಕರ್, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಆರ್‌ಎಸ್ಎಸ್‌ನಲ್ಲಿ ಸಕ್ರಿಯರಾಗಿದ್ದರು.  1994 ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಣಜಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮನೋಹರ್ ಪರ್ರಿಕರ್ ಜಯ ಸಾಧಿಸಿದ್ದರು.

ನಾಲ್ಕು ಬಾರಿ ಗೋವಾ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಮನೋಹರ್ ಪರ್ರಿಕರ್, 2014 ರಿಂದ 2017ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ತಮ್ಮ ಸರಳತೆ, ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅಪರೂಪದ ರಾಜಕಾರಣಿ ಮನೋಹರ್ ಪರ್ರಿಕರ್, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೂ ಮೆಚ್ಚುಗೆ ಪಡೆದಿದ್ದರು.

ಮನೋಹರ್ ಪರ್ರಿಕರ್ ನಿಧಾನಕ್ಕೆ ಗೋವಾ ಸರ್ಕಾರ ತೀವ್ರ ಶೋಕ ವ್ಯಕ್ತಪಡಿಸಿದ್ದು, ಅಗಲಿದ ನಾಯಕನ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ನಡೆಸಲಾಗುವುದು ಎಂದು ತಿಳಿಸಿದೆ.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link