ಚಿತ್ರಾ ನಕ್ಷತ್ರಕ್ಕೆ ಗ್ರಹಗಳ ಸೇನಾಪತಿ ಮಂಗಳನ ಪ್ರವೇಶ, 3 ರಾಶಿಗಳ ಜನರ ಮೇಲೆ ಧನಕುಬೇರ ಕೃಪೆಯಿಂದ ಭಾರಿ ಧನವೃಷ್ಟಿ!
ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳನನ್ನು ಸಾಹಸ ಹಾಗೂ ಶೌರ್ಯದ ಪ್ರತೀಕ ಎಂದು ಭವಿಡಲಾಗುತ್ತದೆ. ಶೀಘ್ರದಲ್ಲಿಯೇ ಮಂಗಳ ಚಿತ್ರಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಧನಕುಬೇರ ಯೋಗ ಪ್ರಾಪ್ತಿಯಾಗಲಿದ್ದು, ಅವರ ಜೀವನದಲ್ಲಿ ಸಾಕಷ್ಟು ಧನ-ಸಮೃದ್ಧಿ-ಸುಖ-ಸೌಕರ್ಯಗಳು ಪ್ರಾಪ್ತಿಯಾಗಲಿವೆ.
ಮೇಷ ರಾಶಿ- ಮಂಗಳ ನಿಮ್ಮ ರಾಶಿಗೆ ಅಧಿಪತಿ. ಹೀಗಾಗಿ ಮಂಗಳನ ಈ ಚಿತ್ರಾ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಆಸ್ತಿ ಪಾಸ್ತಿ ಖರೀದಿಗೆ ನೀವು ಮನಸ್ಸು ಮಾಡುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಬಲವಾಗಿರಲಿದೆ. ದೀರ್ಘಾವಧಿಯ ಯೋಜನೆಗಳು ಪೂರ್ಣಗೊಳ್ಳಲಿವೆ. ವೈವಾಹಿಕ ಜೀವನ ಸುಖಮಯವಾಗಿರಲಿದೆ. ಧಾರ್ಮಿಕ-ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ.
ಸಿಂಹ ರಾಶಿ- ಮಂಗಳನ ಚಿತ್ರಾ ಗೋಚರ ನಿಮ್ಮ ಪಾಲಿಗೆ ಅನುಕೂಲಕರ ಸಿದ್ಧ ಸಾಬೀತಾಗಲಿದೆ, ಇದರಿಂದ ಪಿತ್ರಾರ್ಜಿತ ಆಸ್ತಿಯ ಲಾಭ ನಿಮಗೆ ಸಿಗುವ ಸಾಧ್ಯತೆ ಇದೆ. ಇದಲ್ಲದೆ ನಿಮ್ಮ ಆದಾಯ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳಸಂಗಾತಿಯ ಬೆಂಬಲ ಸಿಗಲಿದ್ದು, ಘನತೆ ಗೌರವಾದಲ್ಲಿ ಹೆಚ್ಚಳವಾಗಲಿದೆ. ಪ್ರತಿಷ್ಠೆ ಕೂಡ ಹೆಚ್ಚಾಗಿ ಕೆಲಸ-ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಪಾಲಿಗೆ ಸಮಯ ಉತ್ತಮವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ.
ಧನು ರಾಶಿ- ಮಂಗಳನ ಈ ಚಿತ್ರಾ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಶುಭ ಫಲಗಳನ್ನು ನೀಡಲಿದೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಸಾಕಷ್ಟು ವೃದ್ದಿಯಾಗಲಿದೆ. ಜೊತೆಗೆ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ನೋಡಲು ಸಿಗಲಿದೆ. ಹಲವು ಯೋಜನೆಗಳಲ್ಲಿ ನಿಮಗೆ ಯಶಸ್ಸು ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಗಳು ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಲಾಭವನ್ನು ತಂದು ಕೊಡಲಿವೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಪದೋನ್ನತಿ ಹಾಗೂ ಸ್ಥಾನಾಂತರದ ಅವಕಾಶ ಸಿಗಲಿದೆ. ವ್ಯಾಪಾರಿ ವರ್ಗದ ಜನರಿಗೆ ಯಾವುದಾದರೊಂದು ದೊಡ್ಡ ಡೀಲ್ ಫೈನಲ್ ಆಗುವ ಸಾಧ್ಯತೆ ಇದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)