ಸ್ವರಾಶಿಗೆ ಮಂಗಳನ ಪ್ರವೇಶ, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ!
Mangala Gochara 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಖ್ಯಾತನಾಗಿರುವ ಮಂಗಳ ಗ್ರಹ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ಮಂಗಳ ರಾಶಿಯಲ್ಲಿ ಗೋಚರಿಸಲಿದ್ದಾನೆ. ಇದರಿಂದ ಹಲವು ರಾಶಿಗಳ ಜಾತಕದವರ ಅದೃಷ್ಟವೆ ಬದಲಾಗಲಿದ್ದು, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿಯಾಗಲಿದೆ.
ವೃಶ್ಚಿಕ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಸಾಹಸ ಹೆಚ್ಚಾಗಲಿದ್ದು, ಆತ್ಮವಿಶ್ವಾಸದಿಂದ ನೀವು ತುಂಬಿರುವಿರಿ. ಆಸ್ತಿ ನಿವೇಶನ ಖರೀದಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರ ವರ್ಗದ ಜನರಿಗೆ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಪೊಲೀಸ್, ಸೇನೆ, ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಕಾಲ ಉತ್ತಮ ಸಾಬೀತಾಗಲಿದೆ.
ಕರ್ಕ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದಂತೆ ನಿಮಗೆ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಮಂಗಳ ನಿಮ್ಮ ಜಾತಕದ ಕರ್ಮ ಭಾವಕ್ಕೆ ಅಧಿಪತಿ. ಹೀಗಾಗಿ ವ್ಯವಹಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದ್ದು, ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ.
ಮೀನ ರಾಶಿ: ನಿಮ್ಮ ಗೋಚರ ಜಾತಕದ 12ನೇ ಭಾವಕ್ಕೆ ಮಂಗಳ ಅಧಿಪತಿಯಾಗಿದ್ದು, ಆತ ನವಮಾಂಶನಾಗಿ 9ನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಜೋತಿಷ್ಯ ಶಾಸ್ತ್ರದಲ್ಲಿ ಈ ಭಾವವನ್ನು ಭಾಗ್ಯದ ಸ್ಥಾನ ಎಂದು ಹೇಳಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅದೃಷ್ಟ ಭಾರಿ ಮೆರಗು ಪಡೆದುಕೊಳ್ಳಲಿದೆ. ಮಹತ್ವದ ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಹಳೆ ಹೂಡಿಕೆಯಿಂದ ಉತ್ತಮ ಆದಾಯ ಹರಿದುಬರಲಿದೆ. ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)