ಐದು ವರ್ಷಗಳ ಬಳಿಕ ಶುಕ್ರ ಮಂಗಳರ ಸಂಯೋಜನೆ, ಹೊಸ ವರ್ಷದಲ್ಲಿ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!
Mars-Venus Conjunction 2024: ವೈದಿಕ ಪಂಚಾಂಗದ ಪ್ರಕಾರ ಶೀಗ್ರದಲ್ಲಿಯೇ ಕುಂಭ ರಾಶಿಯಲ್ಲಿ ಮಂಗಳ ಹಾಗೂ ಶುಕ್ರನ ಮೈತ್ರಿ ನೆರೆವೆರಲಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. (Spiritual News In Kannada)
ಮೇಷ ರಾಶಿ: ಶುಕ್ರ-ಮಂಗಳರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಆದಾಯದ ಮೂಲಗಳು ಕೂಡ ಹೆಚ್ಚಾಗಲಿವೆ. ನೌಕರವರ್ಗದ ಜನರಿಗೆ ಈ ಅವಧಿ ಸಾಕಷ್ಟು ಯಶಸ್ಸಿನಿಂದ ಕೂಡಿರಲಿದೆ. ವೃತ್ತಿ ಜೀವನದಲ್ಲಿ ಉನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ. ಗಳಿಕೆಯ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯಎ ಇದೆ. ಷೇರುಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳಿವೆ.
ವೃಷಭ ರಾಶಿ: ಮಂಗಳ-ಶುಕ್ರರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮ್ಮ ವೃತ್ತಿ-ವ್ಯಾಪಾರ ಜೀವನ ಸಾಕಷ್ಟು ಹೊಳಪನ್ನು ಪಡೆಯಲಿದೆ. ವೃತ್ತಿಗೆ ಸಂಬಂಧಿಸಿದ ನಿಮ್ಮ ಎಲ್ಲಾ ಯೋಜನೆಗಳು ಯಶಸ್ಸನ್ನು ಕಾಣಲಿವೆ. ನೌಕರಿಯ ಬಯಕೆ ಇರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಅಧಿಕ ಧನಲಾಭ ನಿಮ್ಮದಾಗಲಿದೆ. ಉತ್ತಮ ಆರ್ಡರ್ಗಳು ನಿಮಗೆ ಸಿಗುವ ಸಾಧ್ಯತೆ ಇದೆ. ವ್ಯಾಪಾರದ ವಿಸ್ತಾರ ಕೂಡ ಸಂಭವಿಸುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಹೊಸ ವರ್ಷದಲ್ಲಿ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಹೊಸ ನೌಕರಿಯ ಪ್ರಸ್ತಾವನೆ ಕೂಡ ಬರಬಹುದು,
ಮಕರ ರಾಶಿ: ಮಂಗಳ ಹಾಗೂ ಶುಕ್ರನ ಈ ಮೈತ್ರಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ ಮತ್ತು ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಪ್ರಬಲವಾಗಲಿದೆ. ಸರ್ಕಾರಿ ನೌಕರಿ ಪಡೆಯಲು ಪರೀಕ್ಷೆ ಬರೆಯುತ್ತಿರುವವರಿಗೆ ಈ ಅವಧಿಯಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)