ಅನಿಯಮಿತ ಕರೆ, ಡೇಟಾ, ಜಿಯೋ ಸಿನಿಮಾ ಸೇರಿದಂತೆ ಇನ್ನೂ ಹೆಚ್ಚಿನ ಲಾಭ ಬೆಲೆ 200 ರೂ.ಗಿಂತಲೂ ಕಡಿಮೆ!

Fri, 27 Sep 2024-10:57 am,

ಜುಲೈ 2024ರಲ್ಲಿ ಇತರೆ ಟೆಲಿಕಾಂ ಕಂಪನಿಗಳಂತೆ ತನ್ನ  ಪ್ರಿಪೇಯ್ಡ್ ಪ್ಲಾನ್‌ನ ಬೆಲೆಗಳನ್ನು ಹೆಚ್ಚಿಸಿದ್ದ ರಿಲಯನ್ಸ್ ಜಿಯೋ ಇದೀಗ ಮತ್ತೆ ತನ್ನ ಗ್ರಾಹಕರ ಹಿತದೃಷ್ಟಿಯಿಂದ ಕೈಗೆಟುಕುವ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ.

ಅಗ್ಗದ ಬೆಲೆಯ  ಪ್ರಿಪೇಯ್ಡ್ ಪ್ಲಾನ್‌ ಬಿಡುಗಡೆ ಮಾಡಿರುವ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ 200 ರೂ. ಗಿಂತ ಕಡಿಮೆ ಬೆಲೆಯಲ್ಲಿ ಎಷ್ಟೆಲ್ಲಾ ಪ್ರಯೋಜನಗಳನ್ನು ನೀಡುತ್ತೇ ಗೊತ್ತಾ... 

ರಿಲಯನ್ಸ್ ಜಿಯೋ 189 ರೂ. ಪ್ರಿಪೇಯ್ಡ್ ಪ್ಲಾನ್‌ ಪರಿಚಯಿಸಿದೆ. ಕಡಿಮೆ ಬೆಲೆಯಲ್ಲಿ ಪರಿಚಯಿಸಿರುವ ಈ ಯೋಜನೆಯಲ್ಲಿ ಹಲವು ಪ್ರಯೋಜನಗಳು ಸಹ ಲಭ್ಯವಿವೆ. 

ಜಿಯೋದ ಈ  ಪ್ರಿಪೇಯ್ಡ್ ಪ್ಲಾನ್‌ನಲ್ಲಿ ದೇಶಾದ್ಯಂತ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಧ್ವನಿ ಕರೆ, 2GB ಡೇಟಾ, 300 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. 

ಈ ಯೋಜನೆಯಲ್ಲಿ ಪ್ರೀಮಿಯಂ ಚಂದಾದಾರಿಕೆ ಇಲ್ಲದಿದ್ದರೂ ಸಹ ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮತ್ತು ಜಿಯೋ ಟಿವಿಯಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಉಚಿತ ಪ್ರವೇಶವನ್ನು ಒದಗಿಸುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link