Mercury Transit 2022: ಡಿಸೆಂಬರ್ 3ರವರೆಗೆ ಈ ರಾಶಿಯವರಿಗೆ ಕೈತುಂಬಾ ಹಣ ನೀಡಲಿದ್ದಾನೆ ಬುಧ

Thu, 17 Nov 2022-3:23 pm,

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವು ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತವೆ. ಅಂತೆಯೇ, ನವ ಗ್ರಹಗಳಲ್ಲಿ ಯಾವುದೇ ಒಂದು ಗ್ರಹದಲ್ಲಿನ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಗಳ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರುತ್ತದೆ. ಇದೀಗ, ಗ್ರಹಗಳ ರಾಜಕುಮಾರನಾದ ಬುಧ ಗ್ರಹವು ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದು ಡಿಸೆಂಬರ್ 3ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ರಾಶಿಚಕ್ರದ ಜನರು ಈ ಅವಧಿಯಲ್ಲಿ ವಿಶೇಷ ಲಾಭವನ್ನು ಪಡೆಯುತ್ತಾರೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...

ವೃಷಭ ರಾಶಿ: ಜ್ಯೋತಿಷ್ಯಶಾಸ್ತ್ರದ ಪ್ರಕಾರ,  ವೃಶ್ಚಿಕ ರಾಶಿಗೆ ಬುಧನ ಪ್ರವೇಶದಿಂದ ಈ ರಾಶಿಯವರಿಗೆ ಒಳ್ಳೆಯ ದಿನಗಳು ಶುರುವಾಗಿವೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಈ ಸಮಯವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ಇಷ್ಟೇ ಅಲ್ಲ, ಜೀವನದಲ್ಲಿ ಮುನ್ನಡೆಯಲು ಈ ಸಮಯದಲ್ಲಿ ಹಲವು ಅವಕಾಶಗಳು ದೊರೆಯುತ್ತವೆ. ಅದೇ ಸಮಯದಲ್ಲಿ, ಈ ರಾಶಿಚಕ್ರದ ಸ್ಥಳೀಯರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ. 

ಸಿಂಹ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ ಸಂಕ್ರಮಣವು ಈ ರಾಶಿಯ ಸ್ಥಳೀಯರಿಗೆ ಅನುಕೂಲಕರವಾಗಿರುತ್ತದೆ. ಈ ಸಮಯದಲ್ಲಿ, ಆಸ್ತಿ ಇತ್ಯಾದಿಗಳನ್ನು ಸಹ ಖರೀದಿಸಬಹುದು. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಇಷ್ಟೇ ಅಲ್ಲ ಬುಧ ಸಂಕ್ರಮಣದಿಂದ ಈ ರಾಶಿಯ ಸ್ಥಳೀಯರ ಆರ್ಥಿಕ ಸ್ಥಿತಿಗೆ ಅನುಕೂಲವಾಗಲಿದೆ. 

ತುಲಾ ರಾಶಿ: ವೃಶ್ಚಿಕ ರಾಶಿಯಲ್ಲಿ ಬುಧ ಸಂಕ್ರಮಣ ಮಾಡುವುದರಿಂದ ತುಲಾ ರಾಶಿಯವರಿಗೆ ಈ ಸಮಯ ತುಂಬಾ ಲಾಭದಾಯಕ ಎಂದು ಹೇಳಲಾಗುತ್ತದೆ. ಈ ರಾಶಿಚಕ್ರದ ಒಂಬತ್ತು ಮತ್ತು ಹನ್ನೆರಡನೆಯ ಮನೆಯ ಅಧಿಪತಿ ಬುಧ. ಈ ಸಮಯದಲ್ಲಿ, ವಿದೇಶ ಪ್ರವಾಸಕ್ಕೆ ಬಲವಾದ ಅವಕಾಶಗಳಿವೆ. ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲು ಈ ಸಮಯವು ಅನುಕೂಲಕರವಾಗಿದೆ. ಕುಟುಂಬ ಸದಸ್ಯರ ನಡುವಿನ ಸಂಬಂಧಗಳಲ್ಲಿ ಮಧುರತೆ ಇರುತ್ತದೆ. ಅಷ್ಟೇ ಅಲ್ಲ, ಈ ಸಮಯದಲ್ಲಿ ಮನೆಯ ಸದಸ್ಯರಿಗೆ ಸಂಪೂರ್ಣ ಬೆಂಬಲ ಸಿಗುತ್ತದೆ. 

ವೃಶ್ಚಿಕ ರಾಶಿ: ನವೆಂಬರ್ ತಿಂಗಳಿನಲ್ಲಿ ಬುಧವು ಈ ರಾಶಿಯಲ್ಲಿ ಸಾಗಿ ಡಿಸೆಂಬರ್ 3 ರವರೆಗೆ ಇದೇ ರಾಶಿಯಲ್ಲಿ ಇರಲಿದ್ದಾನೆ.  ಈ ಸಮಯದಲ್ಲಿ, ಈ ರಾಶಿಚಕ್ರದ ಜನರು ಬುಧ ಸಂಕ್ರಮಣದಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಈ ಸಮಯವು  ವೃಶ್ಚಿಕ ರಾಶಿಯವರಿಗೆ ವೃತ್ತಿ ಮತ್ತು ವ್ಯವಹಾರಕ್ಕೆ ತುಂಬಾ ಒಳ್ಳೆಯದು. ವ್ಯಾಪಾರದಲ್ಲಿ ಭಾರೀ ಲಾಭ ಬರಬಹುದು. ಈ ಅವಧಿಯಲ್ಲಿ ಇತರ ಹಲವು ರೀತಿಯ ಲಾಭಗಳ ಸಾಧ್ಯತೆಯಿದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link