ಸೆಪ್ಟೆಂಬರ್ 13 ರಿಂದ ಈ ರಾಶಿಗಳ ಜನರ ಜೀವನದಲ್ಲಿ ಹಣವೋ ಹಣದ ಹರಿವು, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ತಿಜೋರಿ ತುಂಬಿ ತುಳುಕಲಿದೆ!
ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 13 ರಂದು ಬುದ್ಧಿ-ಚತುರತೆಯ ಕಾರಕ ಗ್ರಹ ಎಂದೇ ಪರಿಗಣಿಸಲಾಗುವ ಬುಧ ಸಿಂಹ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಷ್ಟೈಶ್ವರ್ಯ ಲಕ್ಷ್ಮಿಯ ಕೃಪೆ ಪ್ರಾಪ್ತಿಯಾಗಲಿದ್ದು ಅವರ ಜೀವನದಲ್ಲಿ ಹಣವೋ ಹಣ ಹರಿದು ಬಂದು ತಿಜೋರಿ ತುಂಬಿ ತುಳುಕಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ,
ಸಿಂಹ ರಾಶಿ:ಬುಧ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಆತನ ಉದಯ ನಿಮ್ಮ ಪಾಲಿಗೆ ಅಂತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳ ಕಂಡುಬರಲಿದೆ. ವ್ಯಕ್ತಿತ್ವದಲ್ಲಿ ಹೊಸ ಹೊಳಪು ಮತ್ತು ಚೈತನ್ಯ ಇರಲಿದೆ. ಪಿತ್ರಾರ್ಜಿತ ಆಸ್ತಿ ಪಾಸ್ತಿಯಿಂದ ನಿಮಗೆ ಲಾಭ ಉಂಟಾಗಲಿದೆ. ನಿಮ್ಮ ಮಹತ್ವಾಕಾಂಕ್ಷೆ ಈಡೇರಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿ ಲಕ್ಕಿ ಸಾಬೀತಾಗುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳಲ್ಲಿ ನಿಮಗೆ ಬಡ್ತಿ ಭಾಗ್ಯ ಪ್ರಾಪ್ತಿಯಾಗಲಿದೆ.
ಮಿಥುನ ರಾಶಿ: ಬುಧನ ಉದಯ ಮಿಥುನ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಉದಯಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಹಾಗೂ ಪರಾಕ್ರಮದಲ್ಲಿ ಹೆಚ್ಚಳ ಕಂಡುಬರಲಿದೆ. ಇದಲ್ಲದೆ ನಿಮಗೆ ಸಹೋದರ ಸಹೋದರಿಯರ ಬೆಂಬಲ ಕೂಡ ಸಿಗಲಿದೆ. ವಿದೇಶದಲ್ಲಿ ನೌಕರಿ ಪಡೆದುಕೊಳ್ಳಲು ಸಿದ್ಧತೆ ನಡೆಸುವ ಜನರಿಗೆ ಇದು ಲಾಭದ ಅವಕಾಶ ಸಾಬೀತಾಗಲಿದೆ. ನಿಮ್ಮ ಗೋಚರ ಜಾತಕದ ಲಗ್ನ ಹಾಗೂ ಚತುರ್ಥ ಭಾವಕ್ಕೆ ಬುಧ ಅಧಿಪತಿಯಾಗಿದ್ದಾನೆ. ಹೀಗಾಗಿ ನೀವು ಆಸ್ತಿಪಾಸ್ತಿ-ವಾಹನ ಖರೀದಿಸುವ ದಟ್ಟ ಸಾಧ್ಯತೆ ಇದೆ.
ಮೇಷ ರಾಶಿ: ಬುಧ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಉದಯಿಸುತ್ತಿದ್ದಾನೆ. ಇದು ನಿಮ್ಮ ಪಾಲಿಗೆ ತುಂಬಾ ಶುಭ ಸಾಬೀತಾಗಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಯೋಗವಿದೆ. ವ್ಯಾಪಾರದಲ್ಲಿ ಹೊಸ ಐಡಿಯಾ ಮೇಲೆ ಕಾರ್ಯನಿರ್ವಹಿಸುವಿರಿ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಗಟ್ಟಿ ನಿರ್ಣಯ ಕೈಗೊಳ್ಳುವಲ್ಲಿ ನೀವು ಯಶಸ್ವಿಯಾಗುವಿರಿ. ಇನ್ನೊಂದೆಡೆ ಬುಧ ನಿಮ್ಮ ಗೋಚರ ಜಾರ್ತಕದ ತೃತೀಯ ಹಾಗೂ ಶಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ನಿಮಗೆ ಯಶಸ್ಸು ಪ್ರಾಪ್ತಿಯಾಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)