Mercury Transit 2024: ಸಿಂಹ ರಾಶಿಯಲ್ಲಿ ಬುಧನ ಸಂಚಾರದಿಂದ 3 ಈ ರಾಶಿಗೆ ಸಿಗಲಿದೆ ಸುಖ-ಸಂಪತ್ತು!

Mon, 15 Jul 2024-6:57 pm,

ಈ ಬುಧ ಸಂಕ್ರಮಣದಿಂದ 3 ರಾಶಿಯವರಿಗೆ ಇದು ತುಂಬಾ ಅದ್ಭುತ ಸಮಯವಾಗಿದೆ. ಈ ಮೂರು ರಾಶಿಯವರಿಗೆ ಅದೃಷ್ಟದ ಬೆಂಬಲ ದೊರೆಯಲಿದ್ದು, ಸುಖ-ಸಂಪತ್ತು ದೊರೆಯಲಿದೆ. ನೀವು ವ್ಯಾಪಾರ ಮತ್ತು ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ಮಾತುಕತೆಯಿಂದ ಅನೇಕ ಕೆಲಸಗಳು ಆಗಲಿವೆ. ಬುಧ ಗ್ರಹವು ಸಿಂಹರಾಶಿಗೆ ಹೋಗುವುದರಿಂದ ಯಾವ ರಾಶಿಯವರಿಗೆ ಈ ಸಮಯ ಉತ್ತಮವೆಂದು ತಿಳಿಯಿರಿ...

ಬುಧನು ಸಿಂಹ ರಾಶಿಯ ಮೊದಲ ಮನೆಯಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ಈ ರಾಶಿಯವರು ಅನೇಕ ಪ್ರಯೋಜನ ಪಡೆಯುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ನಿಮ್ಮ ಕೆಲಸವು ಮೆಚ್ಚುಗೆ ಪಡೆಯುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಅಂದುಕೊಂಡ ಉದ್ಯೋಗ ದೊರೆಯಲಿದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದ್ದು, ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆಯಿದೆ. ವಿದೇಶಿ ವ್ಯಾಪಾರ ಮಾಡುವವರು ಉತ್ತಮ ಲಾಭ ಪಡೆಯುತ್ತಾರೆ. ನಿಮ್ಮ ಹಣಕಾಸಿನ ಸ್ಥಿತಿ ಬಲವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ಆಹ್ಲಾದಕರ ಸಮಯ ಕಳೆಯುತ್ತೀರಿ. ನಿಮ್ಮ ಆರೋಗ್ಯವು ಚೆನ್ನಾಗಿರುತ್ತದೆ.

ಬುಧನು ಧನು ರಾಶಿಯ 9ನೇ ಮನೆಗೆ ಚಲಿಸುತ್ತಾನೆ. ಹೀಗಾಗಿ ಈ ರಾಶಿಯವರು ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲ ಪಡೆಯುತ್ತಾರೆ. ಉದ್ಯೋಗಾಕಾಂಕ್ಷಿಗಳಿಗೆ ಒಳ್ಳೆಯ ಕೆಲಸ ಸಿಗಬಹುದು. ಉದ್ಯೋಗಿಗಳು ತಮ್ಮ ಕೆಲಸದಲ್ಲಿ ತೃಪ್ತರಾಗಿರುತ್ತಾರೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಜಂಟಿ ಉದ್ಯಮ ಮಾಡುವವರು ಉತ್ತಮ ಲಾಭ ಪಡೆಯುತ್ತಾರೆ. ನಿಮ್ಮ ಹಣಕಾಸಿನ ಸ್ಥಿತಿಗತಿಯು ತುಂಬಾ ಬಲವಾಗಿರುತ್ತದೆ. ನೀವು ಅನಿರೀಕ್ಷಿತ ಹಣದ ಲಾಭ ಪಡೆಯುತ್ತೀರಿ. ಅದೃಷ್ಟದ ಸಂಪೂರ್ಣ ಬೆಂಬಲದೊಂದಿಗೆ ಯಶಸ್ಸು & ಸಂಪತ್ತು ಹೆಚ್ಚಾಗುತ್ತದೆ. ನಿಮ್ಮ & ಕುಟುಂಬದ ಆರೋಗ್ಯವು ಚೆನ್ನಾಗಿರುತ್ತದೆ.

ಬುಧನು ತುಲಾ ರಾಶಿಯ 11ನೇ ಮನೆಗೆ ಚಲಿಸುತ್ತಾನೆ. ಇದು ಈ ರಾಶಿಗಳ ಸ್ವಾಭಿಮಾನ & ಧೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಬಹುಕಾಲದ ಆಸೆಗಳು ಈಡೇರುತ್ತವೆ. ವೃತ್ತಿಪರವಾಗಿ ನೀವು ದೊಡ್ಡ ನಿರ್ಧಾರ ತೆಗೆದುಕೊಳ್ಳುವಿರಿ. ಕೆಲಸದ ಸ್ಥಳದಲ್ಲಿ ಉನ್ನತ ಅಧಿಕಾರಿಗಳು ನಿಮ್ಮನ್ನು ಪ್ರಶಂಸಿಸುತ್ತಾರೆ. ನಿಮಗೆ ಕೆಲವು ಪ್ರಮುಖ ಜವಾಬ್ದಾರಿ ನೀಡಬಹುದು. ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ದೊರೆಯುತ್ತದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ನೀವು ಬಹಳಷ್ಟು ಹಣ ಗಳಿಸಬಹುದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link