ಶೀಘ್ರದಲ್ಲೇ ಬುದ್ಧಿದಾತ ಬುಧನ ಧನು ಗೋಚರ, ಈ ರಾಶಿಗಳ ಜನರ ಜೀವನದಲ್ಲಿ ಹಣದ ಹೊಳೆಯೇ ಹರಿಸಲಿದೆ!

Fri, 27 Oct 2023-3:09 pm,

ಬುದ್ಧಿ ಹಾಗೂ ಮಾತಿನ ಕಾರಕ ಬುಧ ನವೆಂಬರ್ 27, 2023 ರಂದು ಬೆಳಗ್ಗೆ 5:41ಕ್ಕೆ ಧನು ರಾಶಿಗೆ ಪ್ರವೇಶಿಸಲಿದ್ದು. ಅಲ್ಲಿ ಆತ ಡಿಸೆಂಬರ್ 28, 2023ರವರೆಗೆ ವಿರಾಜಮಾನನಾಗಲಿದ್ದಾನೆ. ಬಳಿಕ ಹಿಮ್ಮುಖ ಚಲನೆಯ ಕಾರಣ ಮತ್ತೆ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. 

ಮಿಥುನ ರಾಶಿ: ಬುಧನ ಧನು ಗೋಚರ ಮಿಥುನ ಜಾತಕದವರ ಪಾಲಿಗೆ ಸಾಕಷ್ಟು ಲಾಭ ತಂದು ಕೊಡಲಿದೆ. ಧನ-ಧಾನ್ಯದಲ್ಲಿ ಅಪಾರ ವೃದ್ಧಿಯಾಗಿ, ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ಕಾನೂನು ಹೋರಾಟಗಳಲ್ಲಿ ಜಯ ನಿಮ್ಮದಾಗಲಿದೆ. ಪಿತ್ರಾರ್ಜಿತ ಸಂಪತ್ತಿ ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆರ್ಥಿಕ ಸ್ಥಿತಿ ಬಲವಾಗಲಿದೆ. ಆದರೆ, ಅನಾವಶ್ಯಕ ವೆಚ್ಚಗಳನ್ನು ನಿಯಂತ್ರಿಸಲು ಯತ್ನಿಸಿ. 

ಸಿಂಹ ರಾಶಿ: ಬುಧನ ಧನು ಪ್ರವೇಶ ಸಿಂಹ ರಾಶಿಯ ಜಾತಕದವರ ಪಂಚಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ತರ್ಕ-ವಿತರ್ಕಗಳು ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧ ಸಾಬೀತಾಗಲಿವೆ. ನಿಮ್ಮ ಬುದ್ಧಿಯ ಕಾರಣ ನೀವು ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವಿರಿ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. 

ಧನು ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಬುಧನ ಈ ಗೋಚರ ನೆರೆವೆರುತ್ತಿದೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ತಾರ್ಕಿಕ ಶಕ್ತಿಯಿಂದ ನೀವು ಎಲ್ಲರನ್ನು ಸೋಲಿಸುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ಅವರ ಪರಿಶ್ರಮದ ಫಲ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಬಿಸ್ನೆಸ್ ನಲ್ಲಿ ಲಾಭ ನಿಮ್ಮದಾಗುವ ಎಲ್ಲಾ ಸಾಧ್ಯತೆಗಳಿವೆ. ಬುಧ ನಿಮ್ಮ ಜಾತಕದ ಪ್ರಥಮ ಭಾವದಲ್ಲಿರುವ ಕಾರಣ ನೀವು ಬುದ್ಧಿವಂತರಾಗುವಿರಿ, ಹೀಗಿರುವಾಗ ಹಲವು ಸುವರ್ಣಾವಕಾಶಗಳು ನಿಮಗೆ ಒದಗಿ ಬರಲಿವೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link