ಆಗಸ್ಟ್ 21ರವರೆಗೆ ಈ ಐದು ರಾಶಿಯವರಿಗೆ ಹಣದ ಹೊಳೆಯನ್ನೇ ಹರಿಸಲಿದ್ದಾನೆ ಬುಧ
ಮೇಷ ರಾಶಿ: ಸಿಂಹ ರಾಶಿಯಲ್ಲಿ ಬುಧನ ರಾಶಿ ಪರಿವರ್ತನೆಯು ಮೇಷ ರಾಶಿಯವರ ಜೀವನದಲ್ಲಿ ಸಂತೋಷದ ಮಳೆಯನ್ನು ಸುರಿಸಲಿದೆ. ಕೆಲಸದಲ್ಲಿ ನಿರೀಕ್ಷಿತ ಫಲ ದೊರೆಯಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಲಭಿಸುವ ಸಾಧ್ಯತೆ ಇದೆ. ಆರ್ಥಿಕ ಭಾಗವೂ ಚೆನ್ನಾಗಿರಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಬುಧ ಸಂಕ್ರಮವು ಶುಭ ಫಲಿತಾಂಶಗಳನ್ನು ನೀಡುತ್ತದೆ. ಅವರ ಸಂವಹನವು ಉತ್ತಮವಾಗಿರುತ್ತದೆ. . ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಇದು ಉತ್ತಮ ಸಮಯ. ಉದ್ಯೋಗ-ವ್ಯವಹಾರದಲ್ಲಿ ಲಾಭವಾಗಲಿದೆ.
ಕನ್ಯಾ ರಾಶಿ: ಬುಧನ ರಾಶಿ ಬದಲಾವಣೆಯು ಕನ್ಯಾ ರಾಶಿಯ ಜನರಿಗೆ ಹೆಚ್ಚು ಪ್ರಯೋಜನವನ್ನು ನೀಡಲಿದೆ. ಈ ಸಮಯದಲ್ಲಿ ಆರ್ಥಿಕ ಸಂಕಷ್ಟಗಳು ದೂರವಾಗಿ ಉತ್ತಮ ಲಾಭ ಗಳಿಸುವ ಅವಕಾಶಗಳಿವೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ನಿಮ್ಮ ನೆಚ್ಚಿನ ಉದ್ಯೋಗ ಸಿಗಲಿದೆ.
ಧನು ರಾಶಿ: ಆಗಸ್ಟ್ ತಿಂಗಳು ಈ ರಾಶಿಯವರು ಅದೃಷ್ಟದ ಮಾಸ ಎಂದು ಹೇಳಬಹುದು. ದಾಂಪತ್ಯ ಜೀವನ ಸಂತೋಷವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಹೊಸ ಆದಾಯ ಮೂಲಗಳು ಸೃಷ್ಟಿಯಾಗಲಿವೆ.
ಕುಂಭ ರಾಶಿ: ಕುಂಭ ರಾಶಿಯವರಿಗೆ ಬುಧನ ಸಂಚಾರವು ಉದ್ಯೋಗ ಕ್ಷೇತ್ರದಲ್ಲಿ ಲಾಭದಾಯಕವಾಗಿದೆ. ವ್ಯಾಪಾರ-ವ್ಯವಹಾರದಲ್ಲಿಯೂ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ನೌಕರರಿಗೆ ಬಡ್ತಿ ಯೋಗವಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಆರ್ಥಿಕವಾಗಿ ಸಮಯ ಉತ್ತಮವಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.