ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ನಾಳೆ ಮೆಟ್ರೋ ರೈಲುಗಳ ಸಂಚಾರ ಇರುತ್ತೋ.. ಇಲ್ಲವೋ? ಅಧಿಕೃತ ಪ್ರಕಟಣೆ ಇಲ್ಲಿದೆ
ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನರಾದ ಕಾರಣ ರಾಜ್ಯ ಸರ್ಕಾರ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.
ನಾಳೆ ಸಾರ್ವಜನಿಕ ರಜೆ ಘೋಷಣೆ ಹಿನ್ನಲೆಯಲ್ಲಿ 'ನಮ್ಮ ಮೆಟ್ರೋ' ಕೂಡ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುಳ್ಳು ವದಂತಿಯೊಂದು ಎಲ್ಲೆಡೆ ಹರಿದಾಡುತ್ತಿದೆ.
ಇದು ಕೆಲವು ಕಿಡಿಗೇಡಿಗಳ ಕೃತ್ಯವಾಗಿದ್ದು, ನಾಳೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೂ ರಜೆ ಘೋಷಣೆ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.
ನಾಳೆ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ವೇಳಾಪಟ್ಟಿಯಂತೆ ಮೆಟ್ರೋ ಚಲಿಸುತ್ತದೆ ಎಂದು ಮೆಟ್ರೋ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ.
ನಾಳೆ ಮೆಟ್ರೋ ರೈಲುಗಳು ಎಂದಿನಂತೆ ಸೇವೆ ಸಲ್ಲಿಸಲಿವೆ. ಈ ಬಗ್ಗೆ BMRCL ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.