ಪತ್ರಿಕಾಧರ್ಮ, ವೃತ್ತಿಮೌಲ್ಯ ಕಾಪಾಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನವಿ

Mon, 03 Jul 2023-12:15 am,

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿ, "ಸಮಾಜದ ಧ್ವನಿಯಾಗಿ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ವರದಿಗಾರರು ಸದಾ ಕ್ರಿಯಾಶೀಲರಾಗಿದ್ದು, ಯಾವುದೇ ವಿಷಯವಾಗಲಿ ಅದನ್ನು ಪರಿಶೀಲಿಸಿ, ದೂರದೃಷ್ಟಿಯಿಂದ ಸುದ್ದಿ, ಲೇಖನಗಳನ್ನು ನೀಡುತ್ತಾರೆ. ಜಿಲ್ಲೆಯಲ್ಲಿ ಬರೆದ ಅನೇಕ ಸುದ್ದಿಗಳು ರಾಜ್ಯಮಟ್ಟದ ಸುದ್ದಿಗಳಾಗುತ್ತವೆ. ಜಿಲ್ಲೆಯಲ್ಲಿ ಅಧಿಕಾರಿ ವರ್ಗ ಹಾಗೂ ಪತ್ರಕರ್ತರ ಮದ್ಯ ಒಳ್ಳೆಯ ಬಾಂಧವ್ಯವಿದೆ" ಎಂದು ಹೇಳಿದರು.

ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, "ಪತ್ರಿಕಾ ಮಾಧ್ಯಮ ಆಡಳಿತ ಸುಧಾರಣೆಯ ಕನ್ನಡಿಯಾಗಿದೆ. ಶುದ್ಧ ವಿಚಾರಗಳ ಸುದ್ದಿ ಮಾಡುವುದು ಅದೇ ರೀತಿಯಲ್ಲಿ ಅಶುದ್ಧವಾದದ್ದನ್ನು ಕೂಡ ಶುದ್ಧ ಮಾಡಿ ಸುದ್ದಿ ಮಾಡುವ ದೊಡ್ಡ ಜವಾಬ್ದಾರಿ ಪತ್ರಿಕಾ ರಂಗದ ಮೇಲಿದೆ. ಪತ್ರಕರ್ತರು ವರದಿ ಮಾಡುವ ಮುನ್ನ ಮುಂದಾಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬದಲಾವಣೆಗಳನ್ನು ಆಲೋಚಿಸಿ ವರದಿ ಮಾಡಬೇಕು ಇದರಿಂದ ವರದಿಗೆ ಫಲಶ್ರುತಿ ಖಂಡಿತಾ ಸಿಗುತ್ತದೆ" ಎಂದು ಹೇಳಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ರಾಜ್ಯದಲ್ಲಿ ಬೆಳಗಾವಿ 18 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡ ದೊಡ್ಡ ಜಿಲ್ಲೆಯಾಗಿದೆ. ಬೆಳಗಾವಿ ಜಿಲ್ಲೆ ರಾಜ್ಯ ರಾಜಕಾರಣದ ದಿಕ್ಸೂಚಿಯಾಗಿದೆ. ಸಮಾಜ ಒಳ್ಳೆಯ ಬದಲಾವಣೆ ಕಾಣುವುದರಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಬಡವರ ಕಷ್ಟಗಳ ಮೇಲೆ ಬೆಳಕು ಚೆಲ್ಲುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ಅದೇ ರೀತಿಯಲ್ಲಿ ಪತ್ರಕರ್ತರಿಗೆ ಮನೆ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವ ಮೂಲಕ ಪತ್ರಕರ್ತರ ಬಡಾವಣೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.

ಜಿಲ್ಲೆಯಲ್ಲಿ ಪತ್ರಿಕಾ ಭವನ ಇಲ್ಲ, ಪತ್ರಕರ್ತರಿಂದ ಬಹಳ ದಿನಗಳಿಂದ ಪತ್ರಿಕಾಭವನ ನಿರ್ಮಾಣಕ್ಕೆ ಬೇಡಿಕೆ ಇದೆ. ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಬುಡಾ ವ್ಯಾಪ್ತಿಯಲ್ಲಿ 12 ಗುಂಟೆ ಜಾಗೆಯಲ್ಲಿ ನಿವೇಶನ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಮಾಜದ ಅಂಕು-ಡೊಂಕು ತಿದ್ದಿವ ಮೂಲಕ ಸಮಾಜ ಪ್ರಗತಿಪರ ಹೆಜ್ಜೆ ಇಡುವಲ್ಲಿ ಮಾಧ್ಯಮದ ಪಾತ್ರ ಮಹತ್ವದಾಗಿದೆ. ಎಲ್ಲ ವಲಯಗಳಲ್ಲೂ ಸುಧಾರಣೆ ತರುವ ನಿಟ್ಟಿನಲ್ಲಿ ಸಮಾಜದ ಕನ್ನಡಿಯಾಗಿ ಪತ್ರಿಕಾ ಮಾಧ್ಯಮ ಕೆಲಸ ಮಾಡುತ್ತಿದೆ. ಸಮಾಜದ ತಪ್ಪುಗಳನ್ನು ತಿದ್ದುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link