ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಪಿಯೂಷ್ ಗೋಯೆಲ್ ರನ್ನು ಭೇಟಿಯಾದ ಸಚಿವ ಮುರುಗೇಶ್ ನಿರಾಣಿ

Sun, 11 Sep 2022-12:46 pm,

ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯೆಲ್ ರನ್ನು ಭೇಟಿಯಾದರು

ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತದ ಕಾನ್ಸುಲೇಟ್ ಜನರಲ್ ಸಂವಾದ ಸಭೆಯನ್ನು ಆಯೋಜಿಸಿದ್ದರು

2022ರ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿಯಾಗಿ,  ಬಂಡವಾಳ ಹೂಡಿಕೆ ಆಕರ್ಷಿಸಲು ಡಾ. ಮುರುಗೇಶ ಆರ್ ನಿರಾಣಿ ನೇತೃತ್ವದ  ನಿಯೋಗ ಅಮೆರಿಕಕ್ಕೆ ಭೇಟಿ ನೀಡಿದೆ.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ, ಕೌಶಲಾಭಿವೃದ್ಧಿ ಕೇಂದ್ರ ಮತ್ತು ಸಿಕೋರ್ಸ್ಕಿ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆ ಸಂಬಂಧ ವಿಮಾನಯಾನ ಕಂಪನಿಗಳ ಪ್ರಮುಖರೊಂದಿಗೆ ಸಚಿವರು ಚರ್ಚಿಸಿದರು

ಅದಕ್ಕೂ ಮುನ್ನ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಅಂತಾರಾಷ್ಟ್ರೀಯ ರೋಡ್ ಶೋ ಕೈಗೊಂಡಿರುವ ಕಾರ್ಯಕ್ರಮದಲ್ಲಿ ಮುರುಗೇಶ ನಿರಾಣಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರಣಜೀತ್ ಸಿಂಗ್ ಸಂಧು ಅವರನ್ನು ವಾಷಿಂಗ್ಟನ್‌ನಲ್ಲಿ ಭೇಟಿಯಾಗಿ ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವರಿಸಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link