ತೆಂಗಿನೆಣ್ಣೆ ಜೊತೆ ಈ ಗಿಡದ ಎಲೆಯನ್ನು ಬೆರೆಸಿ ತಲೆಗೆ ಹಚ್ಚಿ… ನಿಮಿಷಗಳಲ್ಲಿ ಶಾಶ್ವತವಾಗಿ ಕಪ್ಪಾಗುವುದು ಬಿಳಿಕೂದಲು!

Sun, 08 Oct 2023-2:14 pm,

ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಸಾಮಾನ್ಯವಾಗಿ ಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ, ಮೊದಮೊದಲು ಈ ಸಮಸ್ಯೆಯನ್ನು ಲಘುವಾಗಿ ಪರಿಗಣಿಸಲು ಪ್ರಾರಂಭಿಸುತ್ತಾರೆ. ಆದರೆ ಇದು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಆದ್ದರಿಂದ ಕೆಲವು ಸರಳ ಮನೆಮದ್ದುಗಳನ್ನು ಅಳವಡಿಸಿಕೊಂಡರೆ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ತೆಂಗಿನ ಎಣ್ಣೆಯು ಅನೇಕ ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ನೆತ್ತಿಗೆ ತುಂಬಾ ಉಪಯುಕ್ತವೆಂದು ಪರಿಗಣಿಸಲಾಗಿದೆ. ಬೂದು ಕೂದಲಿನ ಸಮಸ್ಯೆಯನ್ನು ಸಹ ಇದರಿಂದ ಪರಿಹರಿಸಬಹುದು, ಆದರೆ ತೆಂಗಿನ ಎಣ್ಣೆಯನ್ನು ಮಾತ್ರ ಹಚ್ಚುವುದರಿಂದ ಕೂದಲು ಬೆಳ್ಳಗಾಗುವುದಿಲ್ಲ. ಬದಲಿಗೆ ಅದರಲ್ಲಿ ಕೆಲ ವಸ್ತುವನ್ನು ಮಿಶ್ರಣ ಮಾಡಬೇಕು.

ಕೂದಲಿನ ಸಮಸ್ಯೆಗಳನ್ನು ಹೋಗಲಾಡಿಸಲು ನೈಸರ್ಗಿಕ ಪದಾರ್ಥಗಳಿಗಿಂತ ಉತ್ತಮವಾದದ್ದು ಯಾವುದೂ ಇಲ್ಲ. ಕೊಬ್ಬರಿ ಎಣ್ಣೆ ಮತ್ತು ಕರಿಬೇವಿನ ಎಲೆಗಳ ಮಿಶ್ರಣವೂ ಕೂಡ ಇದರಿಂದ ಹೊರತಾಗಿಲ್ಲ.  

ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳು ಮತ್ತು ಪ್ರೋಟೀನ್‌’ಗಳಲ್ಲಿ ಸಮೃದ್ಧವಾಗಿವೆ. ಇವು ಕೂದಲಿನ ಆರೋಗ್ಯಕ್ಕೆ ಬಹಳ ಮುಖ್ಯ. ಇದಕ್ಕಾಗಿ, 2 ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದರಲ್ಲಿ 12-15 ಕರಿಬೇವಿನ ಎಲೆಗಳನ್ನು ಸೇರಿಸಿ ಬಿಸಿ ಮಾಡಿ. ನಂತರ ಅದನ್ನು ಕೂದಲಿಗೆ ಚೆನ್ನಾಗಿ ಹಚ್ಚಿ ಮಸಾಜ್ ಮಾಡಿ. 1-2 ಗಂಟೆಗಳ ನಂತರ ಶಾಂಪೂ ಬಳಸಿ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ಈ ಸೂತ್ರ ಮಾತ್ರವಲ್ಲದೆ, ತೆಂಗಿನ ಎಣ್ಣೆ ಮತ್ತು ನಿಂಬೆ ರಸದ ವಿಧಾನವು ಬಿಳಿಕೂದಲಿಗೆ ರಾಮಬಾಣ. 4 ಚಮಚ ತೆಂಗಿನ ಎಣ್ಣೆಯನ್ನು 4 ಚಮಚ ನಿಂಬೆ ರಸದೊಂದಿಗೆ ಮಿಶ್ರಣ ಮಾಡಿ ಕೂದಲಿನ ಬೇರುಗಳಿಗೆ ಹಚ್ಚಿರಿ. ಸುಮಾರು 45 ನಿಮಿಷದಿಂದ ಒಂದು ಗಂಟೆಯವರೆಗೆ ಹಾಗೆಯೇ ಬಿಡಿ. ಇದು ಕೂದಲಿಗೆ ಹೊಳಪನ್ನು ನೀಡುವುದಲ್ಲದೆ, ನಿಂಬೆಯಲ್ಲಿರುವ ವಿಟಮಿನ್ ಸಿ ಕೂದಲನ್ನು ಬಲಗೊಳಿಸುತ್ತದೆ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link