White Hair Remedy: ಕಳಪೆ ಜೀವನಶೈಲಿ, ಪೋಷಣೆ ಕೊರತೆಯಿಂದಾಗಿ ಅಕಾಲಿಕ ಬಿಳಿ ಕೂದಲಿನ ಸಮಸ್ಯೆ ಬಹುತೇಕರನ್ನು ಬಾಧಿಸುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ.
Home remedies to turn white hair into black: ತಪ್ಪಾದ ಆಹಾರ ಕ್ರಮ, ಕಳಪೆ ಜೀವನಶೈಲಿಯಿಂದಾಗಿ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗಲು ಕಾರಣವಾಗಬಹುದು. ಆದರೆ, ತೆಂಗಿನೆಣ್ಣೆ ನಿಮ್ಮ ಸಮಸ್ಯೆಗೆ ಸುಲಭ ಪರಿಹಾರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವಯಸ್ಸಾದಂತೆ ಕೂದಲು ಬಿಳಿಯಾಗುವುದು ಸಾಮಾನ್ಯ ಸಂಗತಿ. ಆದರೆ, ಇತ್ತೀಚಿನ ದಿನಗಳಲ್ಲಿ ಕಳಪೆ ಆಹಾರ ಹಾಗೂ ಜೀವನಶೈಲಿ, ಕೂದಲಿನ ಆರೈಕೆ ಕೊರತೆಯಿಂದಾಗಿ ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲು ಹೆಚ್ಚಾಗುತ್ತಿದೆ.
ನೆತ್ತಿಯನ್ನು ಆರೋಗ್ಯಕರವಾಗಿರಿಸಿ, ಕೂದಲನ್ನು ಕಪ್ಪಾಗಿಸಲು ಸಹಾಯಕವಾಗುವ ಕೂದಲಿನ ಆರೈಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ತೆಂಗಿನೆಣ್ಣೆ ಕೂದಲನ್ನು ಹಲವು ಸಮಸ್ಯೆಗಳಿಂದ ರಕ್ಷಿಸುತ್ತದೆ.
ಆದಾಗ್ಯೂ, ತೆಂಗಿನೆಣ್ಣೆಯೊಂದಿಗೆ ಕೆಲವು ಪದಾರ್ಥಗಳನ್ನು ಬೆರೆಸಿ ಹಚ್ಚುವುದರಿಂದ ಬಿಳಿ ಕೂದಲಿನ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
ತೆಂಗಿನ ಎಣ್ಣೆಯೊಂದಿಗೆ ಹರಳೆಣ್ಣೆ, ನಿಂಬೆ ರಸ ಇಲ್ಲವೇ ಈರುಳ್ಳಿ ರಸವನ್ನು ಬೆರೆಸಿ ಹಚ್ಚುವುದು ಕಪ್ಪು ಕೂದಲನ್ನು ಪಡೆಯಲು ಲಾಭದಾಯಕ ಎಂದು ಸಾಬೀತುಪಡಿಸಲಿದೆ.
ತೆಂಗಿನೆಣ್ಣೆ ಕೊಬ್ಬಿನಾಮ್ಲಗಳಲ್ಲಿ ಹೇರಳವಾಗಿದ್ದು ಕೂದಲನ್ನು ಬುಡದಿಂದ ಗಟ್ಟಿಯಾಗಿಸಲು ಸಹಾಯಕವಾಗಿದೆ. ಇದರಲ್ಲಿ ಹರಳೆಣ್ಣೆ ಬೆರೆಸಿ ಬಳಸುವುದರಿಂದ ಮಾಲಿನ್ಯದಿಂದ ಕೂದಲನ್ನು ರಕ್ಷಿಸಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯಕವಾಗಲಿದೆ.
ಈರುಳ್ಳಿ ರಸದಲ್ಲಿರುವ ಉರಿಯೂತ ಗುಣಲಕ್ಷಣಗಳು ನೆತ್ತಿಯನ್ನು ಸೋಂಕುಗಳಿಂದ ರಕ್ಷಿಸುತ್ತದೆ. ತೆಂಗಿನೆಣ್ಣೆಯೊಂದಿಗೆ ಈರುಳ್ಳಿ ರಸ ಬಳಸುವುದರಿಂದ ಕೂದಲುದುರುವಿಕೆ ಕಡಿಮೆಯಾಗುವುದರ ಜೊತೆಗೆ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ.
ನಿಂಬೆಹಣ್ಣಿನಲ್ಲಿರುವ ವಿಟಮಿನ್ ಸಿ ನೆತ್ತಿಯನ್ನು ಸ್ವಚ್ಛಗೊಳಿಸಿ, ಕೂದಲಿನ ಪೋಷಣೆಗೆ ಸಹಕಾರಿ ಆಗಿದೆ. ನಿಯಮಿತವಾಗಿ ತೆಂಗಿನೆಣ್ಣೆಯಲ್ಲಿ ನಿಂಬೆರಸ ಬೆರೆಸಿ ಹಚ್ಚುವುದರಿಂದ ಕ್ರಮೇಣ ಬಿಳಿ ಕೂದಲು ಕಪ್ಪಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.