ಕೊಬ್ಬರಿ ಎಣ್ಣೆಯೊಂದಿಗೆ ಈ ವಸ್ತುಗಳನ್ನು ಬೆರೆಸಿ ಹಚ್ಚಿದರೆ ಕೂದಲ ಎಲ್ಲಾ ಸಮಸ್ಯೆಗಳಿಗೂ ಸಿಗಲಿದೆ ಪರಿಹಾರ
ಮೊದಲು ಈರುಳ್ಳಿ ರಸವನ್ನು ತೆಗೆದು ಅದನ್ನು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಬೇಯಿಸಿ. ಇದು ತಣ್ಣಗಾದ ಬಳಿಕ ಈ ಎಣ್ಣೆಯನ್ನು ಕೊಡೋಯಲಿಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ವಾರಕ್ಕೊಮ್ಮೆ ಈ ರೀತಿ ಮಾಡುವುದರಿಂದ ಕೂದಲುದುರುವಿಕೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಕರಿಬೇವಿನ ಎಲೆಗಳನ್ನು ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ನಿಮ್ಮ ಕೂದಲಿಗೆ ಹಚ್ಚಿ. ಇದು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಕರಿಬೇವಿನ ಎಲೆಗಳಲ್ಲಿ ಬೀಟಾ-ಕ್ಯಾರೋಟಿನ್ ಮತ್ತು ಪ್ರೊಟೀನ್ ಗಳು ಕೂದಲಿನ ಬೆಳವಣಿಗೆಗೆ ಒಳ್ಳೆಯದು. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು, ಅಮೈನೋ ಆಮ್ಲಗಳು ಮತ್ತು ಇತರ ಹಲವು ಪೋಷಕಾಂಶಗಳು ಹೇರಳವಾಗಿದ್ದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.
ಕೊಬ್ಬರಿ ಎಣ್ಣೆಗೆ ಕರ್ಪೂರವನ್ನು ಬೆರೆಸಿ ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ದೂರವಾಗುತ್ತದೆ. ಇದರಿಂದ ಕೂದಲು ಉದುರುವ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ಕೂದಲಿಗೆ ಕರ್ಪೂರವನ್ನು ಅನ್ವಯಿಸಲು, ಮೊದಲನೆಯದಾಗಿ 1 ಬೌಲ್ ತೆಂಗಿನ ಎಣ್ಣೆಯನ್ನು ತೆಗೆದುಕೊಳ್ಳಿ. ಅದರಲ್ಲಿ 5 ರಿಂದ 6 ಕರ್ಪೂರವನ್ನು ಪುಡಿ ಮಾಡಿ ಹಾಕಿ. ಈ ಮಿಶ್ರಣವನ್ನು ಹಾಗೆ ಇಟ್ಟು ನೀವು ತಲೆಗೆ ಸ್ನಾನ ಮಾಡುವ ಒಂದು ಗಂಟೆ ಮೊದಲು ಈ ಎಣ್ಣೆಯನ್ನು ಅಪ್ಪ್ಲೈ ಮಾಡಿ.
ಕೂದಲ ಬೆಳವಣಿಗೆಗೆ ತೆಂಗಿನ ಎಣ್ಣೆ ಮತ್ತು ಅಲೋವೆರಾ ಮಿಶ್ರಣವು ನಿಮಗೆ ತುಂಬಾ ಪ್ರಯೋಜನಕಾರಿ. ಇದು ಕೂದಲಿನ ಕಿರುಚೀಲಗಳನ್ನು ಪೋಷಿಸುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಅಲೋವೆರಾದಲ್ಲಿರುವ ಆಂಟಿಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ನೆತ್ತಿಯ ಸತ್ತ ಚರ್ಮವನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಇದು ತಲೆಹೊಟ್ಟು ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಕೂದಲು ಉದುರುವುದನ್ನು ನಿಲ್ಲಿಸುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.