ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್‌ ಜಿ ಸ್ಮಾರಕಕ್ಕೆ ಮೋದಿ ನಮನ.

Sun, 09 Jun 2024-11:07 am,

ಪ್ರಧಾನಿ ಮೋದಿ ಇಂದು ರಾಜ್‌ಘಾಟ್‌ನಲ್ಲಿ ಬಾಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.  

ಮೂರನೆ ಭಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬೆನ್ನಲ್ಲೆ ಬಾಪು ಸ್ಮಾರಕಕ್ಕೆ ಭೇಟಿ ಕೊಟ್ಟ ಮೋದಿ

ಬಾಪು ಅವರ ಸೇವೆ ಮತ್ತು ಸಾಮಾಜಿಕ ಕಲ್ಯಾಣಕ್ಕಾಗಿ ಬಾಪು ಅವರ ಅಚಲ ಬದ್ಧತೆಯಿಂದ ನಾವು ಹೆಚ್ಚು ಸ್ಫೂರ್ತಿ ಪಡೆದಿದ್ದೇವೆ. ಅವರ ಚಿಂತನೆಗಳು ಉತ್ತಮ ಸಮಾಜ ನಿರ್ಮಾಣದಲ್ಲಿ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಬರೆದುಕೊಂಡಿರುವ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ.  

ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಮೋದಿ ನಮನ ಸಲ್ಲಿಸಿದ್ದಾರೆ.   

ಯೋಧರ ಅಚಲ ಧೈರ್ಯ ಮತ್ತು ನಿಸ್ವಾರ್ಥತೆಯು ಅವರ ಮೌಲ್ಯಗಳನ್ನು ಎತ್ತಿಹಿಡಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಅವರ ತ್ಯಾಗವು ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಈ ಸಂದರ್ಭದ ಫೋಟೋಗಳನ್ನ ಹಂಚಿಕಂಡಿದ್ದಾರೆ.  

ನರೇಂದ್ರ ಮೋದಿ ಅಟಲ್ ಜೀ ಅವರಗ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.   

ಅವರ ದೂರದೃಷ್ಟಿಯ ನಾಯಕತ್ವ ಮತ್ತು ಪ್ರಗತಿಯ ಬದ್ಧತೆಯು ನಮ್ಮ ರಾಷ್ಟ್ರಕ್ಕೆ ಹೆಚ್ಚು ಪ್ರಯೋಜನವನ್ನು ನೀಡಿತು. ಅವರ ಮಾತುಗಳು ಮತ್ತು ಕಾರ್ಯಗಳು ನಮ್ಮ ಸರ್ವತೋಮುಖ ಅಭಿವೃದ್ಧಿಯ ಅನ್ವೇಷಣೆಯಲ್ಲಿ ನಮಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ. ಅವರು ನಮಗೆಲ್ಲರಿಗೂ ಮಾರ್ಗದರ್ಶಕ ಬೆಳಕಾಗಿ ಉಳಿದಿದ್ದಾರೆ ಎಂದು ಮೋದಿ ಬರೆದುಕೊಂಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link