Moringa Health Benefits: ಪೋಷಕಾಂಶಗಳ ನಿಧಿ ಈ ಗಿಡ, ಹೇಗೆ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಇಲ್ಲಿ ತಿಳಿದುಕೊಳ್ಳಿ!

Health Benefits Of Drumstick: ಯಾವುದೇ ಒಂದು ಗಿಡದ ಪ್ರತಿಯೊಂದು ಭಾಗ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬ ಮರದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಹೌದು, ನಾವು ನುಗ್ಗೆ ಗಿಡದ ಬಗ್ಗೆ ಮಾತನಾಡುತ್ತಿದ್ದೇವೆ! ಇದನ್ನು ಮೊರಿಂಗಾ ಎಂದೂ ಕರೆಯುತ್ತಾರೆ.

Moringa A Superfood: ಈ ಸೂಪರ್ ಫುಡ್ ಪೋಷಕಾಂಶಗಳ ಆಗರವಾಗಿದ್ದು, ಪ್ರಕೃತಿಯೇ ಅದಕ್ಕೆ ಆರೋಗ್ಯದ ಮ್ಯಾಜಿಕಲ್ ಪಾವರ್ ನೀಡಿದೆ ಎಂಬಂತಿದೆ ಈ ಗಿಡ. ಆಯುರ್ವೇದದಲ್ಲಿಯೂ ಕೂಡ ಈ ಗಿಡವನ್ನು ಹಲವು ಅಔಷಧಿಗಳ ತಯಾರಿಕೆಗೆ ಬಳಸಲಾಗುತ್ತದೆ. 

 

ಇದನ್ನೂ ಓದಿ-Hair Fall Remedy: ಕೂದಲುದುರುವ ಸಮಸ್ಯೆಗೆ ಈ ಎರಡು ಎಲೆಗಳ ಹೇಯರ್ ಮಾಸ್ಕ್ ರಾಮಬಾಣ ಉಪಾಯ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಈ ಗಿಡದ ವಿಭಿನ್ನ ಭಾಗಗಳಾಗಿರುವ ಎಲೆಗಳು, ಹಣ್ಣುಗಳು, ಹೂವುಗಳು ಮತ್ತು ಬೇರುಗಳು - ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ಯಾವ ಸಂಗತಿ ನುಗ್ಗೆಗಿಡವನ್ನು ವಿಶೇಷವಾಗಿಸುತ್ತದೆ? ಬನ್ನಿ ನುಗ್ಗೆಗಿಡದ ಯಾವ ಆರೋಗ್ಯ ಪ್ರಯೋಜನಗಳು ಅದಕ್ಕೆ ಸೂಪರ್ ಫುಡ್ ಸ್ಥಾನಮಾನ ನೀಡುತ್ತೇವೆ ತಿಳಿದುಕೊಳ್ಳೋಣ ಬನ್ನಿ.   

2 /7

1. ಪೋಷಣೆಯ ಶಕ್ತಿ ಕೇಂದ್ರ : ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್ ಮತ್ತು ರಂಜಕದಂತಹ ಅಗತ್ಯ ಖನಿಜಗಳು ಮೊರಿಂಗಾ ಎಲೆಗಳಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದು ವಿಟಮಿನ್ ಎ, ಸಿ, ಇ ಮತ್ತು ಕೆ ಯ ಉತ್ತಮ ಮೂಲವಾಗಿದೆ. ಅಷ್ಟೇ ಅಲ್ಲ, ಮೊರಿಂಗಾವನ್ನು ಪ್ರೋಟೀನ್‌ನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ, ಇದು ಸಸ್ಯಾಹಾರಿಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.  

3 /7

2. ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ: ಮೊರಿಂಗಾವು ಆಂಟಿಆಕ್ಸಿಡೆಂಟ್‌ಗಳಿಂದ  ಸಮೃದ್ಧವಾಗಿದೆ, ಇದು ದೇಹವನ್ನು ಫ್ರೀ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಫ್ರೀ ರಾಡಿಕಲ್ಗಳು ಜೀವಕೋಶಗಳನ್ನು ಹಾನಿಗೊಳಿಸುತ್ತವೆ ಮತ್ತು ಅನೇಕ ರೋಗಗಳಿಗೆ ಕಾರಣವಾಗುತ್ತವೆ.  

4 /7

3. ಮಧುಮೇಹದ ಅಪಾಯ ಕಡಿಮೆ ಮಾಡುತ್ತದೆ: ಮೊರಿಂಗಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ದೇಹವು ರಕ್ತದಲ್ಲಿನ ಸಕ್ಕರೆಯನ್ನು ಉತ್ತಮವಾಗಿ ಬಳಸಲು ಇದು ಅನುವು ಮಾಡಿಕೊಡುತ್ತದೆ.  

5 /7

5. ಜೀರ್ಣಕ್ರಿಯೆಗೆ ಉತ್ತಮ: ಮೊರಿಂಗಾ ಜೀರ್ಣಾಂಗ ವ್ಯವಸ್ಥೆಯ ಆರೋಗ್ಯಕ್ಕೆ ಸಹ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ಹೊಟ್ಟೆಯ ಹುಣ್ಣುಗಳನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯಿಂದ ಪರಿಹಾರವನ್ನು ನೀಡುತ್ತದೆ.  

6 /7

6. ಇಮ್ಯೂನ್ ಬೂಸ್ಟರ್: ಮೊರಿಂಗಾ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಬಲವಾದ ಪ್ರತಿರಕ್ಷಣಾ ವ್ಯವಸ್ಥೆ ಎಂದರೆ ನೀವು ಸೋಂಕುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಮತ್ತು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆಯಾಗುತ್ತದೆ  

7 /7

(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)