Motorola Edge 50 Fusion: ಬಜೆಟ್ ಬೆಲೆಗೆ ಅದ್ಭುತ ಫೀಚರ್ಸ್ ಹೊಂದಿರುವ ಸ್ಮಾರ್ಟ್‌ಫೋನ್
ಮೊಟೊರೊಲಾ ರೇಜರ್ 50 ಫ್ಯೂಜನ್ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದು 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಹೊಂದಿದೆ. ಈ ಫೋನಿನ 1600 ನಿಟ್ಸ್ ಪೀಕ್ ಬ್ರೈಟ್ನೆಸ್, 144Hz ರಿಫ್ರೆಶ್ ರೇಟ್ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಸೌಲಭ್ಯ ಸಹ ಹೊಂದಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14OS ಸಪೋರ್ಟ್ ಸಹ ಇದೆ. ಅಲ್ಲದೇ ಈ ಫೋನ್ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ದ್ವಿತೀಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್ ಸೌಲಭ್ಯ ಹೊಂದಿದೆ. ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡ ಲಭ್ಯವಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ ಮೇ 22ರಿಂದ ಮಾರಾಟಕ್ಕೆ ಲಭ್ಯವಿದೆ. ಈ ಫೋನ್ ಮಿಡ್ನೈಟ್ ಬ್ಲೂ, ಸ್ಪ್ರಿಂಗ್ ಗ್ರೀನ್ ಹಾಗೂ ಹಾಟ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯಲಿದೆ.