PHOTOS : ಬಿಸಿನೆಸ್ ಐಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುರುಗೇಶ್ ನಿರಾಣಿ ಭಾಗಿ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಬಿಸಿನೆಸ್ ಐಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ, ಅಬಕಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಹಲವು ಗಣ್ಯರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ನಿರಾಣಿಯವರು, ರಾಜ್ಯದ ಅಭಿವೃದ್ಧಿಯಲ್ಲಿ ಮಾಧ್ಯಮ ಸ್ನೇಹಿತರ ಹಾಗೂ ಪ್ರೆಸ್ ಕ್ಲಬ್ ನ ಪಾತ್ರವೂ ಅಗಾಧವಾಗಿದೆ. ಸರ್ಕಾರದ ಪ್ರತಿ ಹಂತದಲ್ಲೂ ಮಾಧ್ಯಮಗಳ ಪ್ರತಿಕ್ರಿಯೆಯು ನಿಜಕ್ಕೂ ನಮಗೆ ಮತ್ತಷ್ಟು ಕೆಲಸ ಮಾಡಲು ಸ್ಪೂರ್ತಿ ನೀಡಿದಂತಾಗುತ್ತದೆ ಎಂದರು.
ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವ ಪ್ರೆಸ್ ಕ್ಲಬ್ ನ ಕಾರ್ಯ ಅದ್ಭುತವಾದದ್ದು ಎಂದು ಸಚಿವ ಮುರುಗೇಶ್ ಆರ್ ನಿರಾಣಿ ಹೇಳಿದರು.
ಈ ವೇಳೆ ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯಾ, ಶ್ರೀ ಸಂತೋಷ್ ಗುರೂಜಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.