ಅಣಬೆಯ ಸೇವನೆಯಿಂದ ತಟ್ಟನೆ ಇಳಿಕೆಯಾಗುವುದು ಶುಗರ್‌..ಒಮ್ಮೆ ಟ್ರೈ ಮಾಡಿ ಮಧುಮೇಹ ಚಿಂತೆಗೆ ಗುಡ್‌ ಬೈ ಹೇಳಿ

Sun, 01 Sep 2024-8:18 am,

ಅಣಬೆ ಸೇವನೆ ಆರೋಗ್ಯಕ್ಕೆ ರಾಮಬಾಣ. ವಿಟಮಿನ್‌ಗಳಿಂದ ಹಿಡಿದು ಅಮೈನೋ ಆಮ್ಲಗಳವರೆಗಿನ ಪೋಷಕಾಂಶಗಳು ಅಣಬೆಯಲ್ಲಿವೆ. ಇದನ್ನು ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದಷ್ಟೆ ಅಲ್ಲದೆ ಬೊಜ್ಜನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಅನೇಕ ಜನರು ಅಣಬೆಗಳನ್ನು ಇಷ್ಟಪಡುತ್ತಾರೆ. ಅಣಬೆಗಳು ರುಚಿ ಅಷ್ಟೆ ಅಲ್ಲದೆ  ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. 

ಅಣಬೆಗಳಿಂದ ಸಾಮಾನ್ಯವಾಗಿ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಆದರೆ. ಕೆಲವರಿಗೆ ಮಾತ್ರ ಇದರ ಸೇವನೆಯಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿದಿದೆ.

ಅಣಬೆಗಳನ್ನು ಮಶ್ರೂಮ್ ಎಂದೂ ಸಹ ಕರೆಯುತ್ತಾರೆ.  ಇವು ಆರೋಗ್ಯ ಮತ್ತು ಔಷಧೀಯ ಗುಣಗಳಿಂದ ಕೂಡಿದ್ದು,  ಫೈಬರ್, ಪೊಟ್ಯಾಸಿಯಮ್, ವಿಟಮಿನ್ ಡಿ ಮತ್ತು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿದೆ.

ಅಣಬೆಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು,  ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತವೆ.

ದೇಶದ ಅನೇಕ ಸ್ಥಳಗಳಲ್ಲಿ ಅಣಬೆಗಳನ್ನು ಬೆಳೆಸಲಾಗುತ್ತದೆ. ಔಷಧೀಯ ಗುಣಗಳಿಂದಾಗಿ ಇದಕ್ಕೆ ಹೆಚ್ಚಿನ ಬೇಡಿಕೆಯಿದೆ. 

ಅಣಬೆ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಮಶ್ರೂಮ್ ಬ್ಯಾಕ್ಟೀರಿಯಾ ಮತ್ತು ಇತರ ಶಿಲೀಂಧ್ರಗಳ ಸೋಂಕನ್ನು ಸಹ ಗುಣಪಡಿಸುತ್ತದೆ.

ಹೃದ್ರೋಗಿಗಳಿಗೂ ಅಣಬೆ ತುಂಬಾ ಒಳ್ಳೆಯದು. ಇದು ಪೋಷಕಾಂಶಗಳಲ್ಲಿ ಸಮೃದ್ಧವಾದ್ದು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ ಹೃದಯಾಘಾತದಂತಹ ಅಪಾಯಗಳನ್ನು ಕಡಿಮೆ ಮಾಡುತ್ತದೆ.  

ಅಣಬೆಯ ಸೇವನೆಯಿಂದ ಮಲಬದ್ಧತೆ, ಅಜೀರ್ಣ ಇತ್ಯಾದಿ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಬಹುದು.  ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಸಹ ನಿರ್ವಹಿಸುತ್ತದೆ. ಏಕೆಂದರೆ ಇದರಲ್ಲಿ ಫೋಲಿಕ್ ಆಸಿಡ್ ಮತ್ತು ಕಬ್ಬಿಣಾಂಶ ಹೇರಳವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ದೇಹದಲ್ಲಿನ ರಕ್ತದ ಕೊರತೆಯನ್ನು ಅಣಬೆ ನಿವಾರಿಸುತ್ತದೆ.  ರಕ್ತಹೀನತೆ ಇರುವ ರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ. ಅಣಬೆಯಲ್ಲಿ ಫೋಲಿಕ್ ಆಮ್ಲ ಮತ್ತು ಕಬ್ಬಿಣದ ಅಂಶ ಹೇರಳವಾಗಿದೆ. ಇವು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಅಣಬೆ ಆರೋಗ್ಯದ ಜೊತೆಗೆ ತ್ವಚೆಗೂ ಒಳ್ಳೆಯದು. ಮಶ್ರೂಮ್ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಅಣಬೆಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿವೆ. 

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link