White Hair Remedy :ಈರುಳ್ಳಿ ರಸವು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಜೊತೆಗೆ ಬಿಳಿ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸುತ್ತದೆ. ಆದರೆ ಈರುಳ್ಳಿ ರಸದ ಜೊತೆಗೆ ಈ ಎಣ್ಣೆಯನ್ನು ಬಳಸಿದರೆ ಮಾತ್ರ ಇದು ಸಾಧ್ಯವಾಗುತ್ತದೆ.
Natural Remedy for White Hair : ಇತ್ತೀಚಿನ ದಿನಗಳಲ್ಲಿ ಬಿಳಿ ಕೂದಲಿನ ಸಮಸ್ಯೆ ಸಾಮಾನ್ಯವಾಗಿದೆ.ವಯಸ್ಸಾದಂತೆ ಕೂದಲು ಬಿಳಿ ಬಣ್ಣಕ್ಕೆ ತಿರುಗುವ ಕಾಲವೊಂದಿತ್ತು. ಆದರೆ ಈಗ ಬಿಳಿ ಕೂದಲಿನ ಸಮಸ್ಯೆ ಚಿಕ್ಕ ವಯಸ್ಸಿನಲ್ಲೇ ಕಂಡು ಬರುತ್ತಿದೆ. ಹೀಗೆ ಬಿಳಿಯಾದ ಕೂದಲು ಕಪ್ಪಾಗಿಸಲು ಗೋರಂಟಿ, ಕಲರ್, ಡೈ ಇತ್ಯಾದಿಗಳನ್ನು ಬಳಸುತ್ತಾರೆ.ಆದರೆ ಇದು ನಿಮ್ಮ ಕೂದಲಿಗೆ ಹಾನಿ ಮಾಡುವ ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ ಎನ್ನುವುದು ಕೂಡಾ ಸತ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕೂದಲು ಉದುರುವುದನ್ನು ತಡೆಯಲು ತಲೆಹೊಟ್ಟು ಹೋಗಲಾಡಿಸಲು ಮತ್ತು ಬಿಳಿ ಕೂದಲಿನ ಸಮಸ್ಯೆ ಪರಿಹರಿಸಿಕೊಳ್ಳಲು ಈರುಳ್ಳಿ ರಸವನ್ನು ಬಳಸಲಾಗುತ್ತದೆ. ಆದ್ರೆ ಈರುಳ್ಳಿ ಜೊತೆಗೆ ಎಣ್ಣೆಯನ್ನು ಬೆರೆಸಿದಾಗ ಮಾತ್ರ ನಾವಿ ನೀರೀಕ್ಷಿಸಿದ ಫಲಿತಾಂಶ ಸಿಗುತ್ತದೆ.
ಈರುಳ್ಳಿ ರಸದಲ್ಲಿ ಹೇರಳವಾಗಿರುವ ಆ್ಯಂಟಿಆಕ್ಸಿಡೆಂಟ್‌ಗಳು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.ಇದರಲ್ಲಿರುವ ಸಲ್ಫರ್ ಕೂದಲು ಉದುರುವುದನ್ನು ತಡೆದು ಕೂದಲು ಬೆಳೆಯಲು ಸಹಾಯ ಮಾಡುತ್ತದೆ.
ಬಿಳಿ ಕೂದಲು ಕಪ್ಪಾಗಲು,ತೆಂಗಿನ ಎಣ್ಣೆಯೊಂದಿಗೆ ಈರುಳ್ಳಿ ರಸವನ್ನು ಬೆರೆಸಿ ಹಚ್ಚಬೇಕು. ಅದಕ್ಕಾಗಿ, ಎರಡೂ ಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ಕೂದಲಿಗೆ ಹಚ್ಚಬೇಕು. ಅರ್ಧ ಘಂಟೆಯ ನಂತರ, ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ತೊಳೆಯಬಹುದು. ಹೀಗೆ ಮಾಡುತ್ತಾ ಬಂದರೆ ಬಿಳಿ ಕೂದಲು ಖಂಡಿತವಾಗಿಯೂ ಕಪ್ಪಾಗಲು ಶುರುವಾಗುತ್ತದೆ.
ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸಬೇಕಾದರೆ ನೆಲ್ಲಿ ಕಾಯಿ ರಸವನ್ನು ಈರುಳ್ಳಿ ರಸದೊಂದಿಗೆ ಮಿಶ್ರಣ ಮಾಡಬೇಕು. ಇದಕ್ಕಾಗಿ ಒಂದು ಬಟ್ಟಲಿನಲ್ಲಿ ಎರಡು ಚಮಚ ಈರುಳ್ಳಿ ರಸ ಮತ್ತು ಎರಡು ಚಮಚ ನೆಲ್ಲಿಕಾಯಿ ರಸವನ್ನು ತೆಗೆದುಕೊಳ್ಳಿ. ಈಗ ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ ಮತ್ತು 1-2 ಗಂಟೆಗಳ ಕಾಲ ಬಿಡಿ.ನಂತರ ಮೈಲ್ಡ್ ಶಾಂಪೂವಿನಿಂದ ಕೂದಲನ್ನು ತೊಳೆಯಿರಿ.
ಕೂದಲು ಕಪ್ಪಾಗಲು ಈರುಳ್ಳಿ ರಸವನ್ನು ಅಲೋವೆರಾದೊಂದಿಗೆ ಬೆರೆಸಿ ಹಚ್ಚಬಹುದು. ಇದಕ್ಕಾಗಿ ಅಲೋವೆರಾ ಜೆಲ್ ಮತ್ತು ಈರುಳ್ಳಿ ರಸವನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ.ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಮತ್ತು 2 ರಿಂದ 3 ಗಂಟೆಗಳ ಕಾಲ ಬಿಡಿ. ನಂತರ ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.
ಬಿಳಿ ಕೂದಲನ್ನು ಕಪ್ಪಾಗಿಸಲು ಈರುಳ್ಳಿ ರಸವನ್ನು ಬಳಸಬಹುದು. ಆದಾಗ್ಯೂ, ನೀವು ಈ ಯಾವುದೇ ಪದಾರ್ಥಗಳಿಗೆ ಅಲರ್ಜಿಯನ್ನು ಹೊಂದಿದ್ದರೆ ಅದನ್ನು ಬಳಸದಂತೆ ಎಚ್ಚರಿಕೆ ವಹಿಸಿ.(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)