ಈ ಕಾಳನ್ನು ಅರೆದು ಕೂದಲಿಗೆ ಹಚ್ಚಿದರೆ ಹತ್ತೇ ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುವುದು
ಬಿಳಿ ಕೂದಲು ಕಾಣಿಸಿಕೊಂಡಾಗ ರಾಸಾಯನಿಕ ಕಲರ್ ಬಳಸುವ ಬದಲು ಕೂದಲನ್ನು ನೈಸರ್ಗಿಕವಾಗಿ ಕಪ್ಪು ಮಾಡಲು ಈ ಕಾಳನ್ನು ಬಳಸಿ.ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲದೆ, ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದು.
ಕೂದಲಿನ ಆರೋಗ್ಯದ ವಿಷಯದಲ್ಲಿ ಸಾಸಿವೆ ಬೀಜಗಳು ಮ್ಯಾಜಿಕ್ ಮಾಡಬಲ್ಲದು. ಸಾಸಿವೆ ಬೀಜಗಳಲ್ಲಿ ವಿಟಮಿನ್ ಎ ಕಂಡುಬರುತ್ತದೆ. ಇದು ಕಾಲಜನ್ ಅನ್ನು ಹೆಚ್ಚಿಸಲು ಸಹಾಯ ಮಾಡುವ ಪೋಷಕಾಂಶವಾಗಿದೆ.
ಸಾಸಿವೆ ಕಾಳುಗಳಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಒಮೆಗಾ -3 ಮತ್ತು ವಿಟಮಿನ್ ಇ ನಂತಹ ಪ್ರಮುಖ ಪೋಷಕಾಂಶಗಳು ಕಂಡುಬರುತ್ತವೆ. ಇದು ಕೂದಲನ್ನು ಬಲಪಡಿಸಲು ಮತ್ತು ಕಪ್ಪು ಬಣ್ಣವನ್ನು ಮರಳಿ ತರುವ ಕೆಲಸ ಮಾಡುತ್ತದೆ.
ಸಾಸಿವೆಯಿಂದ ತೆಗೆದ ಎಣ್ಣೆ ಕೂದಲ ಆರೋಗ್ಯಕ್ಕೆ ಔಷಧಿಗಿಂತ ಕಡಿಮೆಯಿಲ್ಲ. ಮೊದಲನೆಯದಾಗಿ, ಎಣ್ಣೆಯನ್ನು ಬಿಸಿ ಮಾಡಿ ನಂತರ ಕೂದಲು ಮತ್ತು ನೆತ್ತಿಯ ಮೇಲೆ ಮಸಾಜ್ ಮಾಡಿ.ಇದು ಬೇರುಗಳಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಕ್ರಮೇಣ ಕಪ್ಪಾಗಲು ಪ್ರಾರಂಭಿಸುತ್ತದೆ.
ಮೊದಲು ಸಾಸಿವೆಯನ್ನು ಒಣಗಿಸಿ ಪುಡಿಯನ್ನು ತಯಾರಿಸಿ. ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಚಮಚ ಸಾಸಿವೆ ಪುಡಿ ಮತ್ತು ಒಂದು ಮೊಟ್ಟೆಯನ್ನು ಮಿಶ್ರಣ ಮಾಡಿ. ಈಗ ಅದಕ್ಕೆ ತೆಂಗಿನೆಣ್ಣೆ ಮತ್ತು ಕ್ಯಾಸ್ಟರ್ ಆಯಿಲ್ ಬೆರೆಸಿ ಹೇರ್ ಮಾಸ್ಕ್ ತಯಾರಿಸಿ ಕೂದಲಿಗೆ ಹಚ್ಚಿ. ಸ್ವಲ್ಪ ಸಮಯದ ನಂತರ ಕೂದಲನ್ನು ಶಾಂಪೂ ಮತ್ತು ಶುದ್ಧ ನೀರಿನಿಂದ ತೊಳೆಯಿರಿ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಂಶೋಧನೆಯ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )