ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆಗೆ ಆಯ್ಕೆ ಬಯಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರಣಾಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ಬೆಳಿಗ್ಗೆ 11.45ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ಮುಖ್ಯಸ್ಥೆ ಉದ್ಭವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಶ್ವಾನ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದು ಎನ್ಡಿಎ ಶಕ್ತಿಪ್ರದರ್ಶನಕ್ಕೆ ಸಾಕ್ಷಿಯಾದರು. (ANI photo)
ವಾರಣಾಸಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. (ANI photo)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ (Twitter/@AmitShah)
ಶಿರೋಮಣಿ ಅಕಾಲಿ ದಳದ ಪೋಷಕರಾದ ಪ್ರಕಾಶ್ ಸಿಂಗ್ ಬಾದಲ್ ಅವರ ಪಾದ ಮುಟ್ಟಿ ನಮಸ್ಕರಿಸುತ್ತಿರುವ ಪ್ರಧಾನಿ ಮೋದಿ. (ANI photo)
ಎನ್ಡಿಎ ಮೈತ್ರಿಕೂಟದ ನಾಯಕರೊಂದಿಗೆ ಪ್ರಧಾನಿ ಮೋದಿ. (ANI photo)
ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೂ ಮೊದಲು ಒಟ್ಟಿಗೆ ಕಾಣಿಸಿಕೊಂಡ ಎನ್ಡಿಎ ಮೈತ್ರಿಕೂಟದ ಹಲವು ನಾಯಕರು. (Twitter/@AmitShah)
ಹಿಂದೆ, ಎನ್ಡಿಎ ಅಡಿಯಲ್ಲಿ ವಿವಿಧ ಪಕ್ಷಗಳೊಂದಿಗೆ ರಾಜಕೀಯ ಮೈತ್ರಿಗಳನ್ನು ರೂಪಿಸುವಲ್ಲಿ ಅಮಿತ್ ಷಾ ಪ್ರಮುಖ ಪಾತ್ರ ವಹಿಸಿದ್ದಾನೆ. (Twitter/@AmitShah)