ಇತ್ತೀಚೆಗಷ್ಟೇ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮೊದಲ ಬಾರಿಗೆ ಈ ವಿಷಯದ ಬಗ್ಗೆ ತೆರೆದಿಟ್ಟಿದ್ದಾರೆ.
ತಮಿಳು ಹಾಗೂ ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ಮಾಡಿರುವ ನಯನತಾರಾ, ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕಾಸ್ಟಿಂಗ್ ಕೌಚ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.
ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಇದೆಯೋ ಇಲ್ಲವೋ ಎಂಬುದರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ನಡವಳಿಕೆಯಿಂದಲೂ ತೊಂದರೆಗಳು ಉಂಟಾಗಬಹುದು ಎಂದಿದ್ದಾರೆ.
ನಾನು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಾಗ ನನಗೂ ಕಮಿಟ್‌ಮೆಂಟ್ ಬಗ್ಗೆ ಕೇಳಲಾಗಿತ್ತು. ನನಗೆ ಇಷ್ಟವಿಲ್ಲ ಎಂದು ನೇರವಾಗಿ ಹೇಳಿದೆ. ನನ್ನ ಪ್ರತಿಭೆಯ ಮೇಲೆ ನಂಬಿಕೆಯಿಟ್ಟು ಈ ಮಟ್ಟಕ್ಕೆ ಬಂದಿದ್ದೇನೆ ಎಂದಿದ್ದಾರೆ.
ಆದರೆ ನಯನತಾರಾ ಮಾಡಿರುವ ಈ ಕಾಮೆಂಟ್‌ಗಳಿಗೆ ಕೆಲವರು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. #Metoo ಸಂದರ್ಭದಲ್ಲಿ ಯಾಕೆ ಸುಮ್ಮನಿದ್ರಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.