Team India: ಐಸಿಸಿ ಟ್ರೋಫಿ ಮಾತ್ರವಲ್ಲ… ಈ ಸ್ಥಾನ ಉಳಿಯಬೇಕೆಂದರೆ 3ನೇ ಏಕದಿನದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕು!

IND vs AUS 3rd ODI Match: ಮಾರ್ಚ್ 22ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೂರನೇ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಪರಿಸ್ಥಿತಿ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಸ್ಥಾನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

1 /5

ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳ ಸೋಲು ಕಂಡಿತ್ತು. ಇದೀಗ ಸರಣಿಯ ಮೂರನೇ ಪಂದ್ಯದಲ್ಲಿ ಗೆಲ್ಲಲೇ ಬೇಕು ಎಂಬ ಪರಿಸ್ಥಿತಿ ಭಾರತಕ್ಕೆ ಎದುರಾಗಿದೆ.

2 /5

ಈ ಪಂದ್ಯ ಭಾರತಕ್ಕೆ ಸರಣಿ ಗೆಲ್ಲಲು ಮಾತ್ರವಲ್ಲ, ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ನಂಬರ್ ಒನ್ ಸ್ಥಾನವನ್ನೂ ಕಾಪಾಡಿಕೊಳ್ಳಲು ಬಹುಮುಖ್ಯವಾಗಿದೆ.

3 /5

ಈಗಾಗಲೇ ಭಾರತ 44 ಏಕದಿನ ಪಂದ್ಯಗಳನ್ನು ಗೆದ್ದು, 114 ಅಂಕಗಳೊಂದಿಗೆ ನಂಬರ್ ವನ್ ಸ್ಥಾನದಲ್ಲಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ 32 ಪಂದ್ಯಗಳಲ್ಲಿ 112 ಅಂಕಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳ ನಡುವಿನ ಅಂಕಗಳಲ್ಲಿರುವ ಅಂತರ ಬಲು ಕಡಿಮೆ.

4 /5

ಕಳೆದ 6 ವರ್ಷಗಳಿಂದ ಚೆನ್ನೈನ ಚೆಪಾಕ್ ಮೈದಾನದಲ್ಲಿ ಗೆಲುವು ಸಾಧಿಸಲು ಟೀಂ ಇಂಡಿಯಾ ಹಾತೊರೆಯುತ್ತಿದೆ. 2019 ರಲ್ಲಿ ಕೊನೆಯ ಬಾರಿ ಟೀಂ ಇಂಡಿಯಾ ಏಕದಿನ ಪಂದ್ಯವನ್ನಾಡಿತ್ತು.  ಆದರೆ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಭಾರತವನ್ನು 8 ವಿಕೆಟ್‌’ಗಳಿಂದ ಸೋಲಿಸಿತು.

5 /5

ಈ ಮೈದಾನದಲ್ಲಿ ಮಹೇಂದ್ರ ಸಿಂಗ್ ಧೋನಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಒಟ್ಟು 6 ಪಂದ್ಯಗಳಲ್ಲಿ 401 ರನ್ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ಅವರು ಆಡಿದ 7 ಪಂದ್ಯಗಳಲ್ಲಿ 283 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 2 ಅರ್ಧ ಶತಕಗಳು ಸೇರಿವೆ.