ಕೇವಲ ಅಡುಗೆ ರುಚಿ ಹೆಚ್ಚಿಸಲು ಮಾತ್ರವಲ್ಲ, ನಿಮ್ಮ ಚರ್ಮ, ಕೂದಲ ಆರೋಗ್ಯಕ್ಕೂ ರಾಮಬಾಣ ಈರುಳ್ಳಿ
ಔಷಧೀಯ ಗುಣಗಳಿಂದ ಸಮೃದ್ಧವಾದ ಈರುಳ್ಳಿ ಆರೋಗ್ಯದ ಜೊತೆಗೆ ಸೌಂದರ್ಯಕ್ಕೂ ಪ್ರಯೋಜನಕಾರಿ. ಈರುಳ್ಳಿಯಲ್ಲಿರುವ ಕ್ಯಾಲ್ಸಿನಿನ್ ಮತ್ತು ರೈಬೋಫ್ಲಾವಿನ್ ನಮ್ಮ ದೇಹವನ್ನು ಆರೋಗ್ಯವಾಗಿಡಲು ತುಂಬಾ ಸಹಕಾರಿ.
ಈರುಳ್ಳಿ ರುಚಿಯ ಜೊತೆಗೆ ಕೂಡಲ ಬೆಳವಣಿಗೆ ಮತ್ತು ಚರ್ಮದ ಸೌಂದರ್ಯಕ್ಕೂ ಪ್ರಯೋಜನಕಾರಿ ಆಗಿದೆ. ಈರುಳ್ಳಿ ಕೂದಲು ಉದುರುವಿಕೆಯನ್ನು ತಡೆಗಟ್ಟಲು ನೈಸರ್ಗಿಕ ಮೂಲವಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಚರ್ಮ ಕಾಂತಿಯುತ, ಕಳೆರಹಿತ ಚರ್ಮವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಇದಕ್ಕಾಗಿ ಈರುಳ್ಳಿಯನ್ನು ಹೇಗೆ ಬಳಸಬೇಕು ಎಂದು ತಿಳಿಯೋಣ...
ಎರಡು ಚಮಚ ಜೇನುತುಪ್ಪದೊಂದಿಗೆ ನಾಲ್ಕನೇ ಒಂದು ಕಪ್ ಈರುಳ್ಳಿ ರಸವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಇದನ್ನು ಕೂದಲಿನ ಬುಡಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಒಂದೆರಡು ಗಂಟೆ ಬಳಿಕ ಹೇರ್ ವಾಶ್ ಮಾಡಿ. ಇದರಿಂದ ಕೂದಲುದುರುವ ಸಮಸ್ಯೆ ಕಡಿಮೆಯಾಗುವುದರ ಜೊತೆಗೆ ಕೂದಲ ಬೆಳವಣಿಗೆಗೂ ಸಹಕಾರಿ ಆಗಿದೆ.
ಒಂದೆರಡು ಈರುಳ್ಳಿ ರಸ ತೆಗೆದು, ಅದರಲ್ಲಿ ಒಂದು ಚಮಚ ಕೊಬ್ಬರಿ ಎಣ್ಣೆ, ಒಂದು ಚಮಚ ಆಲಿವ್ ಎಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಈ ಎಣ್ಣೆಯನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಎರಡು ಗಂಟೆ ಬಳಿಕ ಸೌಮ್ಯವಾದ ಶಾಂಪೂವಿನಿಂದ ತಲೆಯನ್ನು ತೊಳೆಯಿರಿ. ಇದು ಆರೋಗ್ಯಕರ ಕೂದಲ ಬೆಳವಣಿಗೆಗೆ ತುಂಬಾ ಪ್ರಯೋಜನಕರಿ ಆಗಿದೆ.
ಕೆಂಪು ಈರುಳ್ಳಿಯನ್ನು ನುಣ್ಣಗೆ ಕತ್ತರಿಸಿ ಉಪ್ಪು ಸೇರಿಸಿ ಪೇಸ್ಟ್ ತಯಾರಿಸಿ. ಇದನ್ನು ನರಹುಲಿಗಳ ಚರ್ಮದ ಮೇಲೆ ಹಚ್ಚಿ ಮೂರು ಗಂಟೆಗಳ ಕಾಲ ಬಿಟ್ಟು ನಂತರ ನೀರಿನಿಂದ ಸ್ವಚ್ಛಗೊಳಿಸಿ.
ಮುಖದ ಮೇಲಿನ ಸುಕ್ಕುಗಳನ್ನು ನಿವಾರಿಸಿ, ಕಾಂತಿಯುತ ಚರ್ಮವನ್ನು ಪಡೆಯಲು ನಿತ್ಯ ನಿಮ್ಮ ಆಹಾರದಲ್ಲಿ ಈರುಳ್ಳಿಯನ್ನು ತಪ್ಪದೇ ಸೇವಿಸಿ.
ದೇಹದಿಂದ ಹಾನಿಕಾರಕ ಜೀವಾನುಗಳನ್ನು ಹೊರಹಾಕುವ ಮೂಲಕ ಈರುಳ್ಳಿ ಚರ್ಮದ ಸೋಂಕನ್ನು ತಡೆಯುತ್ತದೆ. ಇದು ಸೋಂಕಿನಿಂದ ಉಂಟಾಗುವ ಹಾನಿಯನ್ನು ಕಡಿಮೆಗೊಳಿಸಿ, ಆರೋಗ್ಯಕರ ಮತ್ತು ಕಾಂತಿಯುತ ಚರ್ಮವನ್ನು ನೀಡುತ್ತದೆ.
ಈರುಳ್ಳಿ ಜ್ಯೂಸ್‌ನಲ್ಲಿ ಫ್ಲೇವನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ, ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈರುಳ್ಳಿ ರಸವನ್ನು ತೆಗೆದು, ಅದರಲ್ಲಿ ಒಂದು ಚಮಚ ಆಲಿವ್ ಎಣ್ಣೆಯನ್ನು ಸೇರಿಸಿ. ಈ ಮಿಶ್ರಣವನ್ನು ಮೊಡವೆಗಳ ಮೇಲೆ ಹಚ್ಚಿ ಮತ್ತು 10 ನಿಮಿಷಗಳ ಬಳಿಕ ತಣ್ಣೀರಿನಿಂದ ಅದನ್ನು ಸ್ವಚ್ಛಗೊಳಿಸಿ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.