Jeera Water: ತೂಕ ಇಳಿಕೆಯಷ್ಟೇ ಅಲ್ಲ ಜೀರಿಗೆ ನೀರಿನಿಂದ ಮಹಿಳೆಯರಿಗೆ ಸಿಗುತ್ತೆ ಈ 5 ಪ್ರಯೋಜನ
ಭಾರತೀಯ ಅಡುಗೆ ಮನೆಗಳಲ್ಲಿ ಪ್ರಮುಖ ಮಸಾಲೆ ಪದಾರ್ಥವಾಗಿ ಬಳಸುವ ಜೀರಿಗೆ ಊಟದ ರುಚಿಯನ್ನಷ್ಟೇ ಹೆಚ್ಚಿಸುವುದಿಲ್ಲ ಇದು ಆರೋಗ್ಯ ವೃದ್ಧಿಗೂ ಸಹಕಾರಿ ಆಗಿದೆ.
ಆಯುರ್ವೇದದ ಪ್ರಕಾರ, ರಾತ್ರಿ ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೀರಿಗೆಯನ್ನು ಬೆರೆಸಿ ಬೆಳಿಗ್ಗೆ ಎದ್ದು ಆ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ಮಹಿಳೆಯರು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ. ಅಂತಹ ಐದು ಪ್ರಮುಖ ಪ್ರಯೋಜನಗಳೆಂದರೆ...
ಮಹಿಳೆಯರು ನಿತ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಇದು ತೂಕ ನಷ್ಟವನ್ನು ಪ್ರಚೋದಿಸುತ್ತದೆ.
ಪ್ರತಿ ದಿನ ಜೀರಿಗೆ ನೀರನ್ನು ಕುಡಿಯುವುದರಿಂದ ಮಹಿಳೆಯರು ಪಿಸಿಓಎಸ್ ಸೇರಿದಂತೆ ಮುಟ್ಟಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ನಿತ್ಯ ಜೀರಿಗೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು.
ಪ್ರತಿದಿನ ಜೀರಿಗೆ ನೀರನ್ನು ಕುಡಿಯುವುದರಿಂದ ದೇಹವನ್ನು ಹೈಡ್ರೇಟ್ ಆಗಿರಿಸಲು ಜೊತೆಗೆ ದೇಹವನ್ನು ನಿರ್ವಿಷಗೊಳಿಸಲು ಸಹಕಾರಿ ಆಗುತ್ತದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ಮಹಿಳೆಯರು ಊಟದ ನಂತರ ಕಾಣಿಸಿಕೊಳ್ಳುವ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.