ತೂಕ ಇಳಿಕೆಯಷ್ಟೇ ಅಲ್ಲ, ಈ ಆರೋಗ್ಯ ಸಮಸ್ಯೆಗಳಿಂದಲೂ ರಕ್ಷಿಸುತ್ತೆ ಬೆಂಡೆಕಾಯಿ ನೀರು
ವಿಟಮಿನ್ ಸಿ, ಕೆ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಂ ಸೇರಿದಂತೆ ಹಲವು ಜೀವ ಸತ್ವಗಳಿಂದ ಸಮೃದ್ಧವಾಗಿರುವ ಬೆಂಡೆಕಾಯಿಯನ್ನು ಕತ್ತರಿಸಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರು ಕುಡಿಯುವುದರಿಂದ ಒಟ್ಟಾರೆ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುವ ಮೂಲಕ ತೂಕ ನಷ್ಟವನ್ನು ಬೆಂಬಲಿಸುತ್ತದೆ.
ಹೆಚ್ಚು ಫೈಬರ್ ನಿಂದ ಸಮೃದ್ಧವಾಗಿರುವ ಬೆಂಡೆಕಾಯಿ ನೀರನ್ನು ನಿತ್ಯ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಇದು ನೈಸರ್ಗಿಕ ವಿರೇಚಕವಾಗಿ ಕಾರ್ಯನಿರ್ವಹಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.
ಬೆಂಡೆಕಾಯಿಯಲ್ಲಿರುವ ಜೀವಸತ್ವಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಮದ್ದು. ಹಾಗಾಗಿ, ಮಧುಮೇಹಿಗಳು ನಿತ್ಯ ಬೆಳಿಗ್ಗೆ ಬೆಂಡೆಕಾಯಿ ನೀರು ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಆಗಿದೆ.
ಬೆಂಡೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು, ಕರಗುವ ಫೈಬರ್ ಹೆಚ್ಚಾಗಿರುವುದರಿಂದ ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರು ಕುಡಿಯುವುದರಿಂದ ಹೃದಯದ ಆರೋಗ್ಯಕ್ಕೆ ಉತ್ತಮ ಕೊಡುಗೆ ನೀಡುತ್ತದೆ.
ಬೆಂಡೆಕಾಯಿ ನೀರಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಆಕ್ಸಿಡೇಟಿವ್ ಒತ್ತಡ ನಿವಾರಿಸಿ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಆರೋಗ್ಯಕರ ಹೊಳೆಯುವ ಚರ್ಮಕ್ಕೆ ಕೊಡುಗೆ ನೀಡುತ್ತದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರು ಕುಡಿಯುವುದರಿಂದ ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸಲು ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿ ಆಗಿದೆ.
ಬೆಂಡೆಕಾಯಿಯಲ್ಲಿರುವ ವಿಟಮಿನ್ ಎ, ಬೀಟಾ-ಕ್ಯಾರೊತಿನ್ ಹೇರಳವಾಗಿದ್ದು ಇದು ದೃಷ್ಟಿ ದೋಷವನ್ನು ನಿವಾರಿಸಿ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.