Odisha Train Accident: ಒಡಿಶಾ ರೈಲು ದುರಂತಕ್ಕೆ ಕೊಹ್ಲಿ ಸೇರಿ ಕ್ರಿಕೆಟ್ ದಿಗ್ಗಜರಿಂದ ಸಂತಾಪ!
ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಪ್ರಯಾಣಿಕರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
‘ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ದುಃಖವಾಯಿತು. ತಮ್ಮ ಪ್ರೀತಿ-ಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಆ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.
Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.
— Virat Kohli (@imVkohli) June 3, 2023
‘ಒಡಿಶಾದಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ನೋವಾಯಿತು. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಒಡಿಶಾದ ಪ್ರಯಾಣಿಕರನ್ನು ಆದಷ್ಟು ಬೇಗ ರಕ್ಷಿಸಿ’ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Pained to know about railway accident in Odisha involving Coromandel express and another passenger train. Thoughts and prayers are with the families of those who lost their near and dear ones. Appeal @RailMinIndia & Govt. of Odisha to rescue the passengers at the earliest.
— Harbhajan Turbanator (@harbhajan_singh) June 2, 2023
‘ಒಡಿಶಾದಲ್ಲಿ ನಡೆದ ಈ ಅತ್ಯಂತ ದುರದೃಷ್ಟಕರ ಅಪಘಾತದ ಬಗ್ಗೆ ತಿಳಿದುಕೊಳ್ಳಲು ತುಂಬಾ ಬೇಸರವಾಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಪ್ರೀತಿ-ಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಪ್ರಾಮಾಣಿಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ’ ಎಂದು ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.
Extremely disheartening to learn about this very unfortunate accident in Odisha. I pray for speedy recovery of the injured and offer my sincere condolences to those who have lost their loved ones. https://t.co/zVOr4EqZCD
— VVS Laxman (@VVSLaxman281) June 3, 2023
‘ಒಡಿಶಾದಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ಒಳಗೊಂಡ ಈ ದುರಂತ ರೈಲು ಅಪಘಾತದ ಬಗ್ಗೆ ಕೇಳಿ ಅತ್ಯಂತ ದುಃಖಕರವಾಯಿತು. ತಮ್ಮ ಪ್ರೀತಿ-ಪಾತ್ರರನ್ನು ಕಳೆದುಕೊಂಡಿರುವ ಎಲ್ಲಾ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
Extremely sad hearing about this tragic train accident involving Coromandel Express in Odisha. Condolences to all families who have lost their loved ones and prayers for quick recovery of those injured. https://t.co/9foYqHybNa
— Virender Sehwag (@virendersehwag) June 3, 2023