ಪ್ರತಿದಿನ ರಾತ್ರಿ ಹೊಕ್ಕಳಿಗೆ ಈ ಎಣ್ಣೆಯನ್ನು ಹಚ್ಚಿದರೆ ಏಳೇ ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು !
ನಿಮ್ಮ ಕೂದಲು ನೈಸರ್ಗಿಕವಾಗಿ ಕಪ್ಪು ಮತ್ತು ದಪ್ಪವಾಗಿ ಬೆಳೆಯಬೇಕಾದರೆ ಸುಲಭ ಉಪಾಯವಿದೆ. ಈ ಎಣ್ಣೆಯನ್ನು ರಾತ್ರಿ ವೇಳೆ ಹೊಕ್ಕಳಿಗೆ ಹಚ್ಚಬೇಕು. 4 ರಿಂದ 5 ದಿನಗಳವರೆಗೆ ಹೀಗೆ ಮಾಡುವುದರಿಂದ ಆಶ್ಚರ್ಯಕರ ಫಲಿತಾಂಶ ಕಂಡು ಬರುತ್ತದೆ.
ತೆಂಗಿನ ಎಣ್ಣೆಯು ನಿಮ್ಮ ಕೂದಲನ್ನು ತೇವಗೊಳಿಸುವುದು ಮಾತ್ರವಲ್ಲದೆ ಅದು ಒಣಗದಂತೆ ರಕ್ಷಿಸುತ್ತದೆ. ಇದರ ನಿಯಮಿತ ಬಳಕೆಯಿಂದ ಕಪ್ಪು ಕೂದಲು ಉದ್ದ ಮತ್ತು ದಪ್ಪವಾಗಲು ಪ್ರಾರಂಭವಾಗುತ್ತದೆ. ರಾತ್ರಿ ಮಲಗುವ ಮುನ್ನ ನಿಮ್ಮ ಹೊಕ್ಕಳಿಗೆ ತೆಂಗಿನೆಣ್ಣೆ ಹಚ್ಚಿಕೊಳ್ಳಿ.
ಆಯುರ್ವೇದ ತಜ್ಞರ ಪ್ರಕಾರ ಚಂದನದ ಎಣ್ಣೆಯು ಕೂದಲಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದರ ಬಳಕೆಯಿಂದ ಕೂದಲು ಬಿಳಿಯಾಗುವುದು ಕಡಿಮೆಯಾಗುತ್ತದೆ. ಚಂದನದ ಎಣ್ಣೆಯನ್ನು ನೇರವಾಗಿ ಕೂದಲಿಗೆ ಹಚ್ಚುವ ಬದಲು ಹೊಕ್ಕುಳಕ್ಕೆ ಹಚ್ಚಿದರೆ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ.
ಚಳಿಗಾಲದಲ್ಲಿ ಬಳಸಲು ಅತ್ಯುತ್ತಮ ಎಣ್ಣೆಯೆಂದರೆ ಅದು ಸಾಸಿವೆ ಎಣ್ಣೆ. ನಮ್ಮ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಈ ಎಣ್ಣೆಯನ್ನು ಬಳಸಲಾಗುತ್ತದೆ. ಇದು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.
ಇಲ್ಲಿಯವರೆಗೆ ನೀವು ಅನೇಕ ದುಬಾರಿ ಉತ್ಪನ್ನಗಳನ್ನು ಬಳಸಿರಬೇಕು. ಬಾದಾಮಿ ಎಣ್ಣೆಯಲ್ಲಿರುವ ವಿಟಮಿನ್ ಇ ನಿಮ್ಮ ಕೂದಲನ್ನು ದಪ್ಪ ಮತ್ತು ಉದ್ದವಾಗಿಸಲು ಸಹಾಯ ಮಾಡುತ್ತದೆ. ಪ್ರತಿ ರಾತ್ರಿ ಮಲಗುವ ಮೊದಲು ಇದನ್ನು ಹೊಕ್ಕಳಿಗೆ ಹಚ್ಚಿದರೆ ಕೆಲವೇ ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು. (ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)