ಬೆಂಡೆ ಕಾಯಿಯನ್ನು ಈ ರೀತಿ ತಿಂದು ನೋಡಿ ಚಿಟಿಕೆಯಲ್ಲಿ ನಿಯಂತ್ರಣಕ್ಕೆ ಬರುವುದು ಬ್ಲಡ್ ಶುಗರ್

Okra in Diabetes :ಬೆಂಡೆಕಾಯಿಯಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣವಿದೆ. ಇದು ತೂಕವನ್ನು ಕಡಿಮೆ ಮಾಡಲು ಕೂಡಾ ಸಹಾಯ ಮಾಡುತ್ತದೆ.
 

ಬೆಂಗಳೂರು : ನೀವು ಮಧುಮೇಹ ರೋಗಿಗಳಾಗಿದ್ದರೆ, ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ತರಕಾರಿಗಳು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮಾಂತ್ರಿಕವಾಗಿ ಸಹಾಯ ಮಾಡುತ್ತದೆ. ನಾವಿಲ್ಲಿ ಬೆಂಡೆ ಕಾಯಿ ಬಗ್ಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರ ಜೊತೆಗೆ  ದೇಹ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಫೈಬರ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಬೆಂಡೆಕಾಯಿ ಒಂದು ಸೂಪರ್‌ಫುಡ್. ಅದನ್ನು ಆಹಾರದಲ್ಲಿ ಸೇರಿಸಿದರೆ, ಅದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿದೆ. 

2 /4

ಬೆಂಡೆಕಾಯಿಯಲ್ಲಿರುವ ಕರಗದ ಫೈಬರ್ ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ. ಮತ್ತೊಂದೆಡೆ, ಬೆಂಡೆಕಾಯಿಯಲ್ಲಿ ಅಪಾರ ಪ್ರಮಾಣದ ಪ್ರೋಟೀನ್ ಕೂಡ ಕಂಡುಬರುತ್ತದೆ. ಸರಿಯಾದ ಪ್ರಮಾಣದಲ್ಲಿ ಬೆಂಡೆಕಾಯಿಯನ್ನು ಸೇವಿಸಿದರೆ, ಅದು ನಿಮ್ಮನ್ನು ದೀರ್ಘಕಾಲದವರೆಗೆ  ಶಕ್ತಿಯುತವಾಗಿರಿಸುತ್ತದೆ.  

3 /4

ಮಧುಮೇಹವನ್ನು ನಿಯಂತ್ರಿಸಲು ಬೆಂಡೆಕಾಯಿ ನೀರನ್ನು ಸಹ ಕುಡಿಯಬಹುದು. ಬೆಂಡೆಕಾಯಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ನಂತರ ನೀರನ್ನು ಕುಡಿಯಿರಿ. ಹೀಗೆ ಮಾಡುವುದರಿಂದ ನೀವು ಬೆಂಡೆಕಾಯಿಯ ಪೋಷಕಾಂಶಗಳನ್ನು ಪಡೆಯುವುದು ಮಾತ್ರವಲ್ಲದೆ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.  

4 /4

ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿಯೋ, ಅದರ ಬೀಜಗಳೂ ಅಷ್ಟೇ ಪ್ರಯೋಜನಕಾರಿ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬೆಂಡೆ ಕಾಯಿ ಬೀಜಗಳನ್ನು ಹುರಿದು ತಿನ್ನಬಹುದು. ಈ ಬೀಜಗಳು ಟೈಪ್ 2 ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

You May Like

Sponsored by Taboola