ಈ ತರಕಾರಿಯನ್ನು ಬೇಯಿಸಿ ತಿಂದರೆ ಸಾಕು ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ ! ಮಧುಮೇಹಿಗಳು ಇದನ್ನೊಮ್ಮೆ ಟ್ರೈ ಮಾಡಲೇ ಬೇಕು!
ನಾವು ಈ ತರಕಾರಿಯನ್ನು ಕುದಿಸಿ ಅದರ ನೀರನ್ನು ಕುಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಇದು ಮಧುಮೇಹವನ್ನು ನಿಯಂತ್ರಣದಲ್ಲಿ ಇಡುವುದು ಮಾತ್ರವಲ್ಲ ಇನ್ನೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ.
ಮಧುಮೇಹಿಗಳು ತಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕಾದರೆ ಈರುಳ್ಳಿ ರಸವನ್ನು ಕುಡಿಯಲು ಪ್ರಾರಂಭಿಸಬೇಕು. ಅದರ ಸಹಾಯದಿಂದ, ಟೈಪ್ -1 ಮತ್ತು ಟೈಪ್ -2 ರೋಗಿಗಳು ಪರಿಹಾರ ಪಡೆಯಬಹುದು. ಈರುಳ್ಳಿಯ ಗ್ಲೈಸೆಮಿಕ್ ಸೂಚ್ಯಂಕವು ಕಡಿಮೆಯಾಗಿದ್ದು, ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತದೆ. ಹೀಗಾಗಿ ರಕ್ತದ ಹರಿವಿನಲ್ಲಿ ಸಕ್ಕರೆ ನಿಧಾನವಾಗಿ ಬಿಡುಗಡೆಯಾಗುತ್ತದೆ.
ಈರುಳ್ಳಿಯನ್ನು ಹಲವು ವಿಧದ ಅಡುಗೆಯಲ್ಲಿ ಬಳಸಲಾಗುತ್ತದೆ. ಇದನ್ನು ಸಲಾಡ್ ರೂಪದಲ್ಲಿ ಹಾಗೆಯೆ ತಿನ್ನುವುದು ಆರೋಗ್ಯಕ್ಕೆ ಇನ್ನೂ ಸಹಾಯಕವಾಗಿದೆ.
ಈರುಳ್ಳಿಯನ್ನು ಕುದಿಸಿ ಅದರ ರಸ ತೆಗೆದು ಕುಡಿದರೆ ದೇಹಕ್ಕೆ ಡಿಟಾಕ್ಸ್ ಡ್ರಿಂಕ್ಸ್ ಆಗಿ ಕೆಲಸ ಮಾಡುತ್ತದೆ. ಈ ಮನೆಮದ್ದು ದೇಹದಲ್ಲಿನ ಕ್ಯಾಲೊರಿಗಳನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಮಧುಮೇಹ ರೋಗಿಗಳಿಗೆ ಬಹಳಷ್ಟು ಪ್ರಯೋಜನವಾಗುತ್ತದೆ.
2 ಮಧ್ಯಮ ಗಾತ್ರದ ಈರುಳ್ಳಿಯನ್ನು ನುಣ್ಣಗೆ ಕತ್ತರಿಸಿ.ಈಗ ಅದನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಹಾಕಿ ನಂತರ 1 ಕಪ್ ನೀರು, ಒಂದು ಚಿಟಿಕೆ ಬ್ಲಾಕ್ ಸಾಲ್ಟ್ ಮತ್ತು 1 ಚಮಚ ನಿಂಬೆ ರಸವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕುಡಿಯುವುದರಿಂದ ದೇಹವು ಸಾಕಷ್ಟು ಫೈಬರ್ ಮತ್ತು ಅನೇಕ ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)