ಈರುಳ್ಳಿ ಇದರ ಜೊತೆ ನೆನೆಸಿಟ್ಟು ಊಟಕ್ಕೂ ಮೊದಲು ತಿಂದರೆ ಶುಗರ್ ಲೆವಲ್ ವರ್ಷವಿಡಿ ಎಂದಿಗೂ ಹೆಚ್ಚಾಗಲ್ಲ!
ಈರುಳ್ಳಿ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ತರಕಾರಿ. ಇದರ ಸೇವನೆಯಿಂದ ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗದಂತೆ ನಿಯಂತ್ರಿಸಬಹುದು.
ವಿನೆಗರ್‌ನಲ್ಲಿ ಅದ್ದಿದ ಈರುಳ್ಳಿಯನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದಾಗದೆ.
ಈರುಳ್ಳಿಯನ್ನು ವಿನೆಗರ್ ಜೊತೆ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ರಂಜಕ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳ ಅನೇಕ ಗುಣಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ.
ಅಲರ್ಜಿ ವಿರೋಧಿ ಗುಣಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ. ನಿಮ್ಮ ದೇಹವು ಅನೇಕ ರೀತಿಯ ಸೋಂಕುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿನೆಗರ್ ಜೊತೆಗೆ ಈರುಳ್ಳಿಯನ್ನು ಸೇವಿಸಬೇಕು.
ವಿನೆಗರ್‌ನಲ್ಲಿ ಈರುಳ್ಳಿ ನೆನಯಿಟ್ಟು ತಿಂದರೆ ಹೃದಯದ ಆರೋಗ್ಯಕ್ಕೆ ಉತ್ತಮ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರೋಬಯಾಟಿಕ್‌ಗಳನ್ನು ಹೊಂದಿರುವ ಕಾರಣ ಹೊಟ್ಟೆಯಲ್ಲಿ ಆರೋಗ್ಯಕರ ಕಿಣ್ವಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ.
ವಿನೆಗರ್‌ನಲ್ಲಿ ಅದ್ದಿದ ಈರುಳ್ಳಿಯನ್ನು ತಿನ್ನುವುದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನ ದಿನನಿತ್ಯ ತಿನ್ನುವುದರಿಂದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.
ಈರುಳ್ಳಿ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಅನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿನೆಗರ್ ಕೂಡ ಇಂತಹ ಗುಣಗಳನ್ನು ಹೊಂದಿದ್ದು ಎರಡನ್ನೂ ಒಟ್ಟಿಗೆ ತಿಂದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ.
ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.