ಬಿಳಿ ಕೂದಲನ್ನು 10 ನಿಮಿಷದಲ್ಲಿ ಕಪ್ಪಾಗಿಸುತ್ತೆ ಈ ಹಣ್ಣಿನ ಸಿಪ್ಪೆ.. ಬಳಸುವ ವಿಧಾನ ಹೀಗೇ ಆಗಿರಲಿ!
ಕಿತ್ತಳೆ ಸಿಪ್ಪೆ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಫೈಬರ್, ವಿಟಮಿನ್ ಮತ್ತು ಆಂಟಿ ಆಕ್ಸಿಡೆಂಟ್ ಗುಣಗಳನ್ನು ಕಿತ್ತಳೆ ಹೊಂದಿರುತ್ತದೆ.
ಕಿತ್ತಳೆ ಆರೋಗ್ಯಕ್ಕೆ ವರದಾನಕ್ಕಿಂತ ಕಡಿಮೆಯಿಲ್ಲ. ಆರೋಗ್ಯದ ಜೊತೆಗೆ ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಾಗಿದೆ. ಕಿತ್ತಳೆ ಸಿಪ್ಪೆಯನ್ನು ಬಳಸುವುದರ ಮೂಲಕ ಬಿಳಿಕೂದಲಿನಿಂದ ಶಾಶ್ವತವಾಗಿ ಮುಕ್ತಿ ಪಡೆಯಬಹುದು.
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಬಳಿಕ ಇದನ್ನು ಪುಡಿ ಮಾಡಿ. ಕಿತ್ತಳೆ ಸಿಪ್ಪೆಯ ಪುಡಿಗೆ ಒಂದು ಅಥವಾ ಎರಡು ಚಮಚ ತೆಂಗಿನ ಎಣ್ಣೆ, ಅಲೋವೆರಾ ಜೆಲ್ ಮತ್ತು ರೋಸ್ ವಾಟರ್ ಸೇರಿಸಿ ಮಿಶ್ರಣ ಮಾಡಿ.
ಈ ಪ್ಯಾಕ್ ಅನ್ನು ಕೂದಲಿಗೆ ಬುಡದಿಂದ ತುದಿಯವರೆಗೆ ಹಚ್ಚಿ, ಮಸಾಜ್ ಮಾಡಿ. 10 ರಿಂದ 20 ನಿಮಿಷಗಳ ಬಿಟ್ಟು ಬೆಚ್ಚಗಿನ ನೀರಿನಿಂದ ತೊಳೆಯಿರಿ.
ವಾರಕ್ಕೆ 2-3 ಬಾರಿ ಕಿತ್ತಳೆ ಸಿಪ್ಪೆಯ ಪ್ಯಾಕ್ ಹಾಕುವುದರಿಂದ ಬಿಳಿ ಕೂದಲಿನ ಸಮಸ್ಯೆಗೆ ಸಂಪೂರ್ಣ ಪರಿಹಾರ ನೀಡುತ್ತದೆ.
ಕಿತ್ತಳೆ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು, ಕೂದಲಿನ ಹೊಳಪನ್ನು ಹೆಚ್ಚಿಸುತ್ತದೆ. ಅಲ್ಲದೆ, ಕೂದಲು ಉದ್ದ, ದಪ್ಪ ಮತ್ತು ಬಲಶಾಲಿಯಾಗಿಸಲು ಕಿತ್ತಳೆ ಸಿಪ್ಪೆಯನ್ನು ಬಳಸಬಹುದು.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.