`ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ಜನಪರ ಆಡಳಿತ ನೀಡಲು ನಮ್ಮ ಸರ್ಕಾರ ಬದ್ಧ`
ಈ ನಾಡಿನ ಜನತೆಗೆ ಅಧಿಕಾರ ನೀಡುವ ಮೂಲಕ ಬದಲಾವಣೆಯನ್ನು ತಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆಯನ್ನು ತಂದಿವೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ಜನಪರ ಆಡಳಿತ ನೀಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ತಿಳಿಸಿದೆ.
ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನತೆ ಅಧಿಕಾರಕ್ಕೆ ಬಂದಂತೆ. ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಇಂದಿಗೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ ಒಂದು ವರ್ಷ ಪೂರ್ಣಗೊಂಡಿದೆ.ಕರ್ನಾಟಕದಲ್ಲಿ ಭಾರತ್ ಜೋಡೋ ಮತ್ತು ಮೇಕೆದಾಟು ಯಾತ್ರೆ ಸಾಗಿದ ಕಡೆಗೆ ಕಾಂಗ್ರೆಸ್ ಗೆಲುವಿನ ವಿಜಯೋತ್ಸವವನ್ನು ಆಚರಿಸಿದೆ.
ಇನ್ನು, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುವ ವೇಳೆಯಲ್ಲಿ ಎಐಸಿಸಿ ಅಧ್ಯಕ್ಷರಾಗಿದ್ದ ಶ್ರೀಮತಿ ಸೋನಿಯಾ ಗಾಂಧಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿ, ನಮ್ಮ ರಾಜ್ಯದ ಹಿರಿಯ ಮುಖಂಡರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಇದೊಂದು ಇತಿಹಾಸ ಎಂದು ಹೇಳಲು ಹೆಮ್ಮೆ ಆಗುತ್ತದೆ.
ಇಡೀ ದೇಶವನ್ನು ಒಗ್ಗೂಡಿಸಬೇಕು, ದೇಶದ ಜನತೆಯಲ್ಲಿ ಸಾಮರಸ್ಯ ಮೂಡಿಸಬೇಕು ಎಂಬ ಉದ್ದೇಶದೊಂದಿಗೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ಮುನ್ನಡೆಸಿದರು. ದೇಶದ ಶಾಂತಿಗಾಗಿ ನಡೆದ ಈ ಯಾತ್ರೆಯಲ್ಲಿ ನಮ್ಮ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರು ಕೂಡ ಹೆಜ್ಜೆ ಹಾಕಿ ನಮಗೆ ಬೆಂಬಲ ನೀಡಿದರು.
ರಾಹುಲ್ ಗಾಂಧಿ ಅವರು ನಮ್ಮ ರಾಜ್ಯದಲ್ಲಿ 500ಕ್ಕೂ ಹೆಚ್ಚು ಕಿ.ಮೀ ಪಾದಯಾತ್ರೆಯನ್ನು ಮಾಡಿ, ಕನ್ಯಾಕುಮಾರಿ ವರೆಗೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ಈ ದೇಶದ ಐಕ್ಯತೆ ಸಮಗ್ರತೆ ಶಾಂತಿ ಕಾಪಾಡುವ ಉದ್ದೇಶದೊಂದಿಗೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್ ಜೋಡೋ ಯಾತ್ರೆಯನ್ನು ನಡೆಸಿದರು. ಐತಿಹಾಸಿಕ ಭಾರತ್ ಜೋಡೋ ಯಾತ್ರೆಯಲ್ಲಿ ನಾನು ಕನ್ಯಾಕುಮಾರಿ, ತಮಿಳುನಾಡು, ಹರಿಯಾಣದ ಕೆಲವು ಭಾಗದಲ್ಲಿ ಹೆಜ್ಜೆ ಹಾಕಿದ್ದೇನೆ.