Parijata Remedies: ಸೌಂದರ್ಯ, ಹಣ, ಆರೋಗ್ಯಕ್ಕೆ ಪಾರಿಜಾತ ಪರಿಹಾರ
ಆರೋಗ್ಯಕ್ಕೂ ಪ್ರಯೋಜನಕಾರಿ ಪಾರಿಜಾತ ಹೂ: ಪಾರಿಜಾತ ಹೂವು ಪೂಜೆ ಅಥವಾ ಸಮೃದ್ಧಿಗೆ ಮಾತ್ರ ಪ್ರಯೋಜನಕಾರಿಯಲ್ಲ, ಇದು ಆರೋಗ್ಯಕ್ಕೂ ಅತ್ಯಂತ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ, ಪಾರಿಜಾತ ಅಥವಾ ಅದರ ರಸವನ್ನು ಸೇವಿಸುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಪಾರಿಜಾತ ಪರಿಹಾರ: ನೀವು ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಕಷ್ಟ ಪಟ್ಟು ದುಡಿದು ಹಣ ಸಂಪಾದಿಸಿದರೂ ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ಇದಕ್ಕಾಗಿ ಪಾರಿಜಾತ ಪರಿಹಾರವನ್ನು ಒಮ್ಮೆ ಟ್ರೈ ಮಾಡಿ. ಇದಕ್ಕಾಗಿ ನೀವು 5 ಪಾರಿಜಾತದ ಹೂವುಗಳನ್ನು ತೆಗೆದುಕೊಂಡು ಚೆನ್ನಾಗಿ ಒಣಗಿಸಿ ಹಳದಿ ಬಟ್ಟೆಯಲ್ಲಿ ಕಟ್ಟಿ ಅದನ್ನು ನೀವು ಹಣ ಇಡುವ ಜಾಗದಲ್ಲಿ ಇಡಿ. ಮಂಗಳವಾರದಂದು ಈ ಪರಿಹಾರ ಮಾಡುವುದರಿಂದ ಅಂತಹ ಮನೆಯಲ್ಲಿ ಹಣದ ಮಳೆ ಸುರಿಯಲಿದೆ ಎಂದು ಹೇಳಲಾಗುತ್ತದೆ.
ಚರ್ಮದ ಸಮಸ್ಯೆಗಳಿಗೆ ಪರಿಹಾರ : ಪಾರಿಜಾತ ಸಸ್ಯದ ಎಲೆಗಳನ್ನು ರುಬ್ಬಿ ತ್ವಚೆಗೆ ಹಚ್ಚುವುದರಿಂದ ಚರ್ಮದ ಸಮಸ್ಯೆಗಳು ದೂರವಾಗುತ್ತವೆ. ಇದರ ಹೂವನ್ನು ಪೇಸ್ಟ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಮುಖ ಕಾಂತಿಯುತವಾಗಿ ಹೊಳೆಯುತ್ತದೆ.
ಈ ಆರೋಗ್ಯ ಸಮಸ್ಯೆಗಳಿಗೂ ಪಾರಿಜಾತ ಮದ್ದು : ಸಂಧಿವಾತ, ಸಿಯಾಟಿಕಾ, ಮೂಳೆ ಮುರಿತಗಳು, ಚರ್ಮ ರೋಗಗಳು, ಪೈಲ್ಸ್, ಜ್ವರ, ಡೆಂಗ್ಯೂ, ಮಲೇರಿಯಾ, ಒಣ ಕೆಮ್ಮು, ಮಧುಮೇಹ ಮುಂತಾದ ವಿವಿಧ ಅಸ್ವಸ್ಥತೆಗಳು ಮತ್ತು ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಪಾರಿಜಾತವನ್ನು ಬಳಸಲಾಗುತ್ತದೆ.
ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ : ಪಾರಿಜಾತವು ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಒತ್ತಡವನ್ನು ನಿವಾರಿಸುತ್ತದೆ ಮತ್ತು ಆರೋಗ್ಯಕರ ಮತ್ತು ಸಂತೋಷದ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.