Fruit For Control High Blood Sugar: ಪ್ರಕೃತಿಯಲ್ಲಿ ಸಿಗುವ ಕೆಲವು ಹಣ್ಣು-ತರಕಾರಿಗಳು ನಮ್ಮ ದೇಹಕ್ಕೆ ಶಕ್ತಿ ನೀಡುವುದಲ್ಲದೇ ಅನೇಕ ರೋಗಗಳಿಂದಲೂ ಮುಕ್ತಿ ನೀಡುತ್ತವೆ.. ಅಂತಹ ಹಣ್ಣಿನ ಬಗ್ಗೆ ಇಂದು ನಾವು ತಿಳಿದುಕೊಳ್ಳೋಣ..
ಪ್ಯಾಶನ್ ಹಣ್ಣು.. ಇದನ್ನು ಕೃಷ್ಣ ಹಣ್ಣು ಎಂದೂ ಕರೆಯುತ್ತಾರೆ. ಈ ಪ್ಯಾಶನ್ ಹಣ್ಣು ಒಳಗೆ ತಿರುಳು ಮತ್ತು ಬೀಜಗಳಿಂದ ತುಂಬಿರುತ್ತದೆ. ರುಚಿಯಲ್ಲಿ ಅದ್ಭುತವಾಗಿರುವ ಈ ಹಣ್ಣು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಈ ಹಣ್ಣಿನಲ್ಲಿ 500 ಕ್ಕೂ ಹೆಚ್ಚು ಪ್ರಭೇದಗಳಿವೆ..
ಪ್ಯಾಶನ್ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.
ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪ್ಯಾಶನ್ ಹಣ್ಣುಗಳನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.
ಈ ಹಣ್ಣಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಕಾರಣದಿಂದಾಗಿ ದೇಹದಲ್ಲಿನ ಸಕ್ಕರೆಮಟ್ಟ ಹೆಚ್ಚಾಗುವುದಿಲ್ಲ. ಜೊತೆಗೆ, ಇದು ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ.
ಪ್ಯಾಶನ್ ಹಣ್ಣು ಪೊಟ್ಯಾಸಿಯಮ್ ಮತ್ತು ಎಲೆಕ್ಟ್ರೋಲೈಟ್ಗಳನ್ನು ಹೊಂದಿರುತ್ತದೆ. ಇವು ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ಇದರಲ್ಲಿರುವ ಫೈಬರ್ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅನೇಕ ಉಪಯುಕ್ತ ಸಂಯುಕ್ತಗಳು ಪ್ಯಾಶನ್ ಹಣ್ಣಿನ ಬೀಜಗಳಲ್ಲಿದ್ದು, ಇವುಗಳಿಂದ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.. ಇದಲ್ಲದೇ ಈ ಹಣ್ಣಿನಲ್ಲಿರುವ ಪಿಸೆಟಾನಾಲ್ ಮತ್ತು ಸ್ಕಿರ್ಪುಸಿನ್ ಬಿ ಎಂಬ ಸಂಯುಕ್ತವು ಹೃದಯ ಸಂಬಂಧಿ ಕಾಯಿಲೆಗಳನ್ನು ನಿವಾರಿಸುತ್ತದೆ.
ಪ್ಯಾಶನ್ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಬೀಟಾ ಕ್ಯಾರೋಟಿನ್ ನಂತಹ ಪೋಷಕಾಂಶಗಳಿವೆ, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ ಅನೇಕ ರೋಗಗಳನ್ನು ಗುಣಪಡಿಸುತ್ತದೆ.
ಪ್ಯಾಶನ್ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ದೇಹದ ಚಯಾಪಚಯ ಕ್ರಿಯೆಯು ವೇಗವಾಗಿ ನಡೆಯುತ್ತದೆ.. ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ..