EPFO Wage Ceiling Hike:ಇಪಿಎಫ್‌ಒ ಸುಧಾರಣೆಗಳ ಭಾಗವಾಗಿ, ಭಾರತ ಸರ್ಕಾರವು ನೌಕರರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ವೇತನ ಮಿತಿಯನ್ನು 15,000 ದಿಂದ 21,000 ಕ್ಕೆ ಏರಿಸುವ ಬಗ್ಗೆ ಯೋಚಿಸುತ್ತಿದೆ.
EPFO Wage Ceiling Hike : EPF ಸದಸ್ಯರಿಗೆ ಬಹಳಷ್ಟು ಒಳ್ಳೆಯ ಸುದ್ದಿಗಳು ಬರುತ್ತಿವೆ. ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಉದ್ಯೋಗಿಗಳ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಪ್ರಕ್ರಿಯೆಗಳನ್ನು ಸರಳಗೊಳಿಸಲು ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇಪಿಎಫ್‌ಒ ಸುಧಾರಣೆಗಳ ಭಾಗವಾಗಿ, ಭಾರತ ಸರ್ಕಾರವು ನೌಕರರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ವೇತನ ಮಿತಿಯನ್ನು 15,000 ದಿಂದ 21,000 ಕ್ಕೆ ಏರಿಸುವ ಬಗ್ಗೆ ಯೋಚಿಸುತ್ತಿದೆ.
ಇಪಿಎಫ್ ಯೋಜನೆಗೆ ಸೇರುವ ಇಪಿಎಫ್ ಸದಸ್ಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅವರ ಆರ್ಥಿಕ ಭದ್ರತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ವೇತನ ಮಿತಿ ಹೆಚ್ಚಿಸಬೇಕು ಎನ್ನುವ ಬೇಡಿಕೆ ಕೂಡಾ ಜಾಸ್ತಿಯಾಗುತ್ತಿದೆ.
ವೇತನ ಮಿತಿಯನ್ನು ಹೆಚ್ಚಿಸುವ ವಿಷಯ ಮತ್ತು ಈ ಆಗ್ಗೆ ಚರ್ಚೆ ಅನೇಕ ದಿನಗಳಿಂದ ನಡೆಯುತ್ತಿದೆ. ಆದ್ದರಿಂದ, ಕೇಂದ್ರ ಸರ್ಕಾರವು ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.
ಪ್ರಸ್ತುತ, ತಿಂಗಳಿಗೆ 15,000 ವರೆಗೆ ವೇತನ ಪಡೆಯುವ ಉದ್ಯೋಗಿಗಳು ಮಾತ್ರ ಕಡ್ಡಾಯವಾಗಿ ಇಪಿಎಫ್ ವ್ಯಾಪ್ತಿಗೆ ಬರುತ್ತಾರೆ. ಈ ಮಿತಿಯನ್ನು 2014ರಲ್ಲಿ ನಿಗದಿಪಡಿಸಲಾಗಿದ್ದು, ಅಂದಿನಿಂದ, ಸಂಬಳ, ಹಣದುಬ್ಬರ ಮತ್ತು ಜೀವನ ವೆಚ್ಚದಿಂದ ಹಿಡಿದು ಎಲ್ಲದರಲ್ಲೂ ಗಮನಾರ್ಹ ಬದಲಾವಣೆಯಾಗಿದೆ.
ವೇತನ ಮಿತಿಯನ್ನು 21,000 ರೂ.ಗಳಿಗೆ ಹೆಚ್ಚಿಸುವ ಮೂಲಕ, ಹೆಚ್ಚಿನ ಉದ್ಯೋಗಿಗಳಿಗೆ ಇಪಿಎಫ್ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳುವ ಗುರಿಯನ್ನು ಸರ್ಕಾರ ಹೊಂದಿದೆ. ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದರೆ, ಪಿಂಚಣಿ ಮೊತ್ತ ಹೆಚ್ಚಾಗುತ್ತದೆ.